ಕರುನಾಡು ಘರ್ಜುನೆ ಸುದ್ದಿ ಗದಗ : ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಮಾರ್ಚ್ 8 ರಂದು ಬೆಳಿಗ್ಗೆ 11 ಗಂಟೆಗೆ ಸ್ಥಳ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಆವರಣದಲ್ಲಿ ಇರುವ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ , ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.
ಗದಗ ತಾಲ್ಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಕೆ ಮಂದಾಲಿ ಅವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.