Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಕಿತ್ತೂರ್ ಕರ್ನಾಟಕದ ಕನಸಾಗಿದ್ದ ಹಜ್ ಭವನ್ ಈಗ ನನಸಾಗಿದೆ ಎಂದು ಕೃತಜ್ಞತೆಗಳು ಸಲ್ಲಿಸಿದ ಮುಸ್ಲಿಂ ಮುಖಂಡರು.

ಕರುನಾಡು ಘರ್ಜುನೆ ಸುದ್ದಿ ಗದಗ: ಕಿತ್ತೂರ ಕರ್ನಾಟಕ ಭಾಗದ ಮುಸ್ಲಿಂ ಸಮುದಾಯದ ಬಹುದಿನಗಳ ಕನಸಾಗಿದ್ದ ಹಜ್ ಭವನ ನಿರ್ಮಾಣದ ಬೇಡಿಕೆಗೆ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ದೊರೆತಿದ್ದು, ಹುಬ್ಬಳ್ಳಿ ನಗರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಘೋಷಣೆ ಮಾಡುವ ಮೂಲಕ ರಾಜ್ಯದ…

ಕರುನಾಡು ಘರ್ಜುನೆ ಸುದ್ದಿ ಗದಗ: ಕಿತ್ತೂರ ಕರ್ನಾಟಕ ಭಾಗದ ಮುಸ್ಲಿಂ ಸಮುದಾಯದ ಬಹುದಿನಗಳ ಕನಸಾಗಿದ್ದ ಹಜ್ ಭವನ ನಿರ್ಮಾಣದ ಬೇಡಿಕೆಗೆ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ದೊರೆತಿದ್ದು, ಹುಬ್ಬಳ್ಳಿ ನಗರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಘೋಷಣೆ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಈ ಭಾಗದ ಮುಸ್ಲಿಂ ಸಮುದಾಯದ ದೀರ್ಘಕಾಲದ ಆಶಯವನ್ನು ಸಾಕಾರಗೊಳಿಸಿದೆ. ಇದರಿಂದ ಕಿತ್ತೂರ ಕರ್ನಾಟಕ ಭಾಗದ ಸಾವಿರಾರು ಹಜ್ ಯಾತ್ರಿಕರಿಗೆ ಮಹತ್ತರವಾದ ಅನುಕೂಲವಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಕೆಡಿಪಿ ಸದಸ್ಯರಾದ ಎಸ್‌.ಡಿ. ಮಕಾನದಾರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಿತ್ತೂರ ಕರ್ನಾಟಕ ಭಾಗದಲ್ಲಿ ಹಜ್ ಭವನ ನಿರ್ಮಾಣದ ಕುರಿತು ಮುಸ್ಲಿಂ ಸಮುದಾಯ ಹಲವು ವರ್ಷಗಳಿಂದ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಾ ಬಂದಿತ್ತು. ಈ ಭಾಗದ ಯಾತ್ರಿಕರು ಹಜ್ ಯಾತ್ರೆಗೆ ತೆರಳುವ ಸಂದರ್ಭದಲ್ಲಿ ಅಗತ್ಯವಿರುವ ಮಾರ್ಗದರ್ಶನ, ತರಬೇತಿ, ವಸತಿ ಹಾಗೂ ಆಡಳಿತಾತ್ಮಕ ವ್ಯವಸ್ಥೆಗಳ ಕೊರತೆಯನ್ನು ಅನುಭವಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಹಜ್ ಭವನ ನಿರ್ಮಾಣದ ಅಗತ್ಯತೆ ಬಹಳ ಹಿಂದಿನಿಂದಲೂ ವ್ಯಕ್ತವಾಗುತ್ತಿತ್ತು ಎಂದು ಹೇಳಿದರು. ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ ಅವರು ಈ ಭಾಗದ ಜನರ ನಾಡಿಮಿಡಿತವನ್ನು ಅರಿತು, ಕಿತ್ತೂರ ಕರ್ನಾಟಕ ಭಾಗದಲ್ಲಿ ಹಜ್ ಭವನ ಸ್ಥಾಪನೆ ಅತ್ಯಾವಶ್ಯಕವೆಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು, ಈ ಕುರಿತು ಮನವರಿಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರ ಸತತ ಪ್ರಯತ್ನ ಮತ್ತು ಬದ್ಧತೆಯ ಫಲವಾಗಿ ಹುಬ್ಬಳ್ಳಿ ನಗರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಘೋಷಣೆ ಹೊರಬಂದಿರುವುದು ಈ ಭಾಗದ ಮುಸ್ಲಿಂ ಸಮುದಾಯಕ್ಕೆ ಸಂತಸದ ವಿಷಯವಾಗಿದೆ ಎಂದು ಮಕಾನದಾರ ಹೇಳಿದರು.

ಹಜ್ ಭವನ ನಿರ್ಮಾಣವಾಗುವುದರಿಂದ ಕಿತ್ತೂರ ಕರ್ನಾಟಕ ಭಾಗದ ಹಜ್ ಯಾತ್ರಿಕರಿಗೆ ಪ್ರಯಾಣ ಪೂರ್ವ ತರಬೇತಿ, ದಾಖಲೆ ಪರಿಶೀಲನೆ, ವಸತಿ ವ್ಯವಸ್ಥೆ ಹಾಗೂ ಇತರೆ ಅಗತ್ಯ ಸೇವೆಗಳು ಒಂದೇ ಕೇಂದ್ರದಲ್ಲಿ ಲಭ್ಯವಾಗಲಿವೆ. ಇದರಿಂದ ಯಾತ್ರಿಕರಿಗೆ ಹೆಚ್ಚಿನ ಸೌಲಭ್ಯಗಳು ಒದಗಲಿದ್ದು, ಹಜ್ ಯಾತ್ರೆಗೆ ಸಂಬಂಧಿಸಿದ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಮಹತ್ವದ ಯೋಜನೆಗೆ ಕಾರಣಕರ್ತರಾದ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ ಅವರಿಗೆ ಅಭಿನಂದನೆ ಸಲ್ಲಿಸಿದ ಮಕಾನದಾರ, ಅವರು ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ.

ವಿಶೇಷವಾಗಿ ಕಳೆದ ಎರಡು ದಶಕಗಳಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಬಲಪಡಿಸಲು ಅವರು ಸಲ್ಲಿಸಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕಿತ್ತೂರ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಸಲೀಂ ಅಹ್ಮದ ಅವರಂತಹ ಅನುಭವಸಂಪನ್ನ ನಾಯಕತ್ವಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವುದು ಅತ್ಯಾವಶ್ಯಕವಾಗಿದೆ.

ಅವರ ಆಡಳಿತಾತ್ಮಕ ಅನುಭವ ಮತ್ತು ಸಂಘಟನಾ ಸಾಮರ್ಥ್ಯವನ್ನು ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಇದೇ ಸಂದರ್ಭದಲ್ಲಿ ಎಸ್‌.ಡಿ. ಮಕಾನದಾರ KPCC ಕಾಂಗ್ರೆಸ್ ಪ್ರಧಾನ ಕರ್ಯದರ್ಶಿಗಳು

ಮೌಲಾನ ಇನಾಯತವುಲ್ಲಾ ಪಿರಜಾದೆ ಜಮೀಯತೆ ಚೇರ್ಮನ ಉಲಮಾಯೆ ಹಿಂದೆ ಗದಗ , ಮುಫ್ತಿ ಶಬ್ಬೀರ್ ಅಹ್ಮದ್ ಬೊದ್ಲೆಖಾನ್, ಯೂಸುಫ್ ನಮಾಜಿ ಮಾಜಿ ಅಂಜುಬನ್ ಅಧ್ಯಕ್ಷರು, ರಿಯಾಜ್ ಅತ್ತಾರ್ ಮುಖಂಡರು, ಫರುಕ್ ಹುಬ್ಬಳ್ಳಿ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷರು ಗದಗ, ಬಾಬಾಜನ್ ಬಳಗನೂರು, ಸಲೀಂ ನರಗುಂದ, ಮಹಮ್ಮದ್ ಅಲಿ ಅಕ್ಕಿ, ಅನ್ವರ್ ಸಾಬ್ ತಹಸೀಲ್ದಾರ್, ಅತಾವುಲ್ಲ ಫಿರ್ಜಾದೆ, ಶಾ ಅಬ್ಜಲ್ ಸೈರಾಟಿ. ಪತ್ರಿಕಾ ಪ್ರಕಟಣೆಯಲ್ಲಿ ಉಪಸ್ಥಿತರಿದರು.

Editor

Leave a comment