Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಯುವನಿಧಿ ಯೋಜನೆಯ ಸೌಲಭ್ಯ ಅರ್ಹರು ಪಡೆದುಕೊಳ್ಳಬೇಕು : ಬಿ.ಬಿ.ಅಸೂಟಿ.

ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 13 : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ…

ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 13 : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.

ನಗರದ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದ ಎಸ್. ಜೆ. ಹಾಲ್ ದಲ್ಲಿ ಮಂಗಳವಾರ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಸಮಾಲೋಚನೆ ಮತ್ತು ಉದ್ಯೋಗಕೋಶ ಆಯೋಜಿಸಲಾದ ವೃತ್ತಿ ಮಾರ್ಗದರ್ಶನ , ಯುವ ನಿಧಿ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 2023 ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆಯೇ ಅನ್ನಭಾಗ್ಯ, ಗೃಹಲಕ್ಷಿö್ಮÃ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ಮಾಸಿಕ ಭತ್ಯೆಯನ್ನು ಗರಿಷ್ಟ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮಾತನಾಡಿ ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು ಎಂದು ತಿಳಿಸಿದರು.

ಆನಂದ ಹೊಂಬಳ ಅವರು ರಾಜ್ಯ ಸರ್ಕಾರದ ಯುವನಿಧಿ ಯೋಜನೆ ವೃತ್ತಿ ಮಾರ್ಗದರ್ಶನ ಕುರಿತು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.

ಉದ್ಯೋಗ ವಿನಿಮಯ ಅಧಿಕಾರಿ ಬಸವಂತಪ್ಪ ಪಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ವಿ.ಟಿ. ನಾಯ್ಕರ್, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ.ಗೋಡಖಿಂಡಿ, ವೃತ್ತಿ ಮಾರ್ಗದರ್ಶನದ ಸಮಾಲೋಚನೆಯ ಮುಖ್ಯಸ್ಥರಾದ ಐ.ಎಂ.ಯಾವಗಲ್ , ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

Editor

Leave a comment