Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ನಗರದ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ‘ಹಸಿರು ಹೊದಿಕೆ’ ಅಳವಡಿಸಲು ಜಿಲ್ಲಾಡಳಿತಕ್ಕೆ ಸವಿತಾ ಸಮಾಜದಿಂದ ಒತ್ತಾಯ.

ಕರುನಾಡು ಘರ್ಜನೆ ಸುದ್ದಿ ಗದಗ 17: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಭೀಕರ ಬಿಸಿಲಿನ ತಾಪಮಾನಕ್ಕೆ ವಾಹನ ಸವಾರರು ತತ್ತರಿಸುತ್ತಿದ್ದು, ಪ್ರಮುಖ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಸಂಚರಿಸುವ ಸಾರ್ವಜನಿಕರ ರಕ್ಷಣೆಗಾಗಿ ಕೂಡಲೇ ‘ಹಸಿರು ಹೊದಿಕೆ’ (Green Net) ಅಳವಡಿಸಿ ನೆರಳಿನ ವ್ಯವಸ್ಥೆ ಮಾಡಬೇಕು…

ಕರುನಾಡು ಘರ್ಜನೆ ಸುದ್ದಿ ಗದಗ 17: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಭೀಕರ ಬಿಸಿಲಿನ ತಾಪಮಾನಕ್ಕೆ ವಾಹನ ಸವಾರರು ತತ್ತರಿಸುತ್ತಿದ್ದು, ಪ್ರಮುಖ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಸಂಚರಿಸುವ ಸಾರ್ವಜನಿಕರ ರಕ್ಷಣೆಗಾಗಿ ಕೂಡಲೇ ‘ಹಸಿರು ಹೊದಿಕೆ’ (Green Net) ಅಳವಡಿಸಿ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಕೆಳಗಿನ ಪ್ರಮುಖ ಅಂಶಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ:

*೧. ಆರೋಗ್ಯದ ಮೇಲೆ ದುಷ್ಪರಿಣಾಮ:*

ಪ್ರಸ್ತುತ ಗದಗ ಜಿಲ್ಲೆಯಲ್ಲಿ ಉಷ್ಣಾಂಶವು ೩೮-೪೦ ಡಿಗ್ರಿ ತಲುಪುತ್ತಿದ್ದು, ಸಿಗ್ನಲ್‌ಗಳಲ್ಲಿ ೬೦ ರಿಂದ ೯೦ ಸೆಕೆಂಡುಗಳ ಕಾಲ ಬಿಸಿಲಿನಲ್ಲಿ ನಿಲ್ಲುವ ಸವಾರರು ಸನ್-ಸ್ಟ್ರೋಕ್ (Sunstroke), ತಲೆಸುತ್ತು ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.

*೨. ಟ್ರಾಫಿಕ್ ನಿಯಮಗಳ ಉಲ್ಲಂಘನೆ ತಡೆ:*

ಸಿಗ್ನಲ್ ಹತ್ತಿರ ನೆರಳಿಲ್ಲದ ಕಾರಣ, ಸವಾರರು ಬಿಸಿಲಿನಿಂದ ಬಚಾವ್ ಆಗಲು ದೂರದಲ್ಲಿರುವ ಮರದ ಕೆಳಗೆ ಅಥವಾ ಕಟ್ಟಡಗಳ ನೆರಳಿನಲ್ಲಿ ವಾಹನ ನಿಲ್ಲಿಸುತ್ತಿದ್ದಾರೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅವಸರದಲ್ಲಿ ಸಿಗ್ನಲ್ ಜಂಪ್ ಮಾಡುವ ಸಾಧ್ಯತೆಗಳೂ ಹೆಚ್ಚಿವೆ. ನೆರಳಿನ ವ್ಯವಸ್ಥೆ ಮಾಡಿದರೆ ಶಿಸ್ತುಬದ್ಧ ಸಂಚಾರಕ್ಕೆ ಅನುಕೂಲವಾಗಲಿದೆ.

*೩. ವಯೋವೃದ್ಧರು ಮತ್ತು ಮಕ್ಕಳ ಹಿತ:*

ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ವೃದ್ಧರು, ಸಣ್ಣ ಮಕ್ಕಳು ಹಾಗೂ ಗರ್ಭಿಣಿಯರಿಗೆ ಈ ಸುಡುವ ಬಿಸಿಲು ಅಸಹನೀಯವಾಗಿದೆ. ಕಳೆದ ವರ್ಷಗಳಲ್ಲಿ ಜಿಲ್ಲಾಡಳಿತವು ಈ ಬಗ್ಗೆ ತೋರಿದ್ದ ಕಾಳಜಿಯನ್ನು ಈ ವರ್ಷವೂ ಮುಂದುವರಿಸಬೇಕಿದೆ.

*೪. ಕೂಡಲೇ ಕ್ರಮಕ್ಕೆ ಆಗ್ರಹ:*

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂತಹ ವ್ಯವಸ್ಥೆ ಜಾರಿಯಲ್ಲಿದೆ. ಗದಗ ನಗರದ ಮುಳಗುಂದ ನಾಕಾ, ಭೂಮರೆಡ್ಡಿ ವೃತ್ತ ಸೇರಿದಂತೆ ಎಲ್ಲಾ ಪ್ರಮುಖ ಸಿಗ್ನಲ್‌ಗಳಲ್ಲಿ ತಕ್ಷಣವೇ ಹಸಿರು ನೆಟ್ ಅಳವಡಿಸಬೇಕು.

“ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯತೆಯಾಗಬೇಕು. ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇನ್ನಷ್ಟು ವಿಳಂಬ ಮಾಡದೆ ಜಿಲ್ಲಾಡಳಿತವು ಈ ಕೂಡಲೇ ಸ್ಪಂದಿಸಬೇಕು” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಅವರು ಆಗ್ರಹಿಸಿದ್ದಾರೆ.

Editor

Leave a comment