Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ಗದಗದಲ್ಲಿ ವಿಪತ್ತು ನಿರ್ವಹಣೆಯ ರೋಚಕ ಪ್ರಾತ್ಯಕ್ಷಿಕೆ.

“ವಿಪತ್ತಿನ ವೇಳೆ ಗಾಬರಿ ಬೇಡ, ಜಾಗೃತಿ ಬೇಕು” – ಗದಗದಲ್ಲಿ ಕಟ್ಟಡ ಕುಸಿತದ ನೈಜ ಪ್ರಾತ್ಯಕ್ಷಿಕೆ ರಕ್ಷಣಾ ಕಾರ್ಯದಲ್ಲಿ ತರಬೇತಿ ಪಡೆದ ನಾಯಿಯ ಚಾತುರ್ಯ ಕರುನಾಡು ಘರ್ಜುನೆ ಸುದ್ದಿ ಗದಗ: ವಿಪತ್ತು ಸಂಭವಿಸಿದಾಗ ಕ್ಷಣಾರ್ಧದಲ್ಲೇ ಸರಿಯಾದ ಕ್ರಮ ಕೈಗೊಳ್ಳುವುದು ಎಷ್ಟು ಮುಖ್ಯ…

“ವಿಪತ್ತಿನ ವೇಳೆ ಗಾಬರಿ ಬೇಡ, ಜಾಗೃತಿ ಬೇಕು” – ಗದಗದಲ್ಲಿ ಕಟ್ಟಡ ಕುಸಿತದ ನೈಜ ಪ್ರಾತ್ಯಕ್ಷಿಕೆ ರಕ್ಷಣಾ ಕಾರ್ಯದಲ್ಲಿ ತರಬೇತಿ ಪಡೆದ ನಾಯಿಯ ಚಾತುರ್ಯ

ಕರುನಾಡು ಘರ್ಜುನೆ ಸುದ್ದಿ ಗದಗ: ವಿಪತ್ತು ಸಂಭವಿಸಿದಾಗ ಕ್ಷಣಾರ್ಧದಲ್ಲೇ ಸರಿಯಾದ ಕ್ರಮ ಕೈಗೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಜನರಿಗೆ ಮನದಟ್ಟು ಮಾಡುವ ಉದ್ದೇಶದಿಂದ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆಯನ್ನು ಬುಧವಾರದಂದು ಗದುಗಿನ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮ ಜನರಲ್ಲಿ ವಿಶೇಷ ಆಸಕ್ತಿ ಮೂಡಿಸಿತು.

ಪ್ರಾತ್ಯಕ್ಷಿಕೆಯ ಪ್ರಮುಖ ಆಕರ್ಷಣೆ ಎಂದರೆ ಕಮಲೇಶ್ ಸಿಂಗ್ ನೇತೃತ್ವದ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡದ ಕಾರ್ಯಚಟುವಟಿಕೆ. ಜಿಲ್ಲಾಸ್ಪತ್ರೆಯ ಒಂದು ಭಾಗದಲ್ಲಿ ಕಟ್ಟಡ ಕುಸಿದಂತ ಅಣಕು ಪರಿಸ್ಥಿತಿ ನಿರ್ಮಿಸಿ, ಅದರೊಳಗೆ ಸಿಲುಕಿರುವವರನ್ನು ರಕ್ಷಿಸುವ ಕಾರ್ಯವನ್ನು ನೈಜ ರೀತಿಯಲ್ಲಿ ಪ್ರದರ್ಶಿಸಲಾಯಿತು.

ತಂಡವು ವಿಶೇಷ ಸಾಧನಗಳನ್ನು ಬಳಸಿ ಅವಶೇಷಗಳೊಳಗಿನ ಜೀವಂತ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸಾಗಿಸುವ ಕ್ರಮಗಳನ್ನು ಹಂತ ಹಂತವಾಗಿ ತೋರಿಸಿತು. ಪ್ರತಿ ಹಂತದಲ್ಲೂ ಸಮಯ ನಿರ್ವಹಣೆ ಮತ್ತು ತಂಡದ ಸಂಯೋಜನೆ ಎಷ್ಟು ಮುಖ್ಯ ಎಂಬುದನ್ನು ಸ್ಪಷ್ಟಪಡಿಸಲಾಯಿತು.

ಇದರ ಜೊತೆಗೆ, ಪ್ರಾತ್ಯಕ್ಷಿಕೆ ವೇಳೆ ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳನ್ನು ನೀಡಲಾಯಿತು. ಕಟ್ಟಡ ಕುಸಿದಾಗ ಗಾಬರಿಯಾಗದೆ ಸುರಕ್ಷಿತ ಸ್ಥಳಕ್ಕೆ ಸರಿಯುವುದು. ತಕ್ಷಣ ತುರ್ತು ಸೇವೆಗಳಿಗೂ ಮಾಹಿತಿ ನೀಡುವುದು. ಅವಶೇಷಗಳ ಬಳಿ ಅನಗತ್ಯವಾಗಿ ಗುಂಪಾಗದೆ ರಕ್ಷಣಾ ಕಾರ್ಯಕ್ಕೆ ಸಹಕರಿಸುವುದು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲ ವಿಧಾನಗಳ‌ ಕುರಿತು ವಿವರಿಸಲಾಯಿತು.

ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಇದು ನೈಜ ಕಲಿಕೆಯ ಮಹತ್ವದ ಅನುಭವವಾಗಿತ್ತು.

ಈ ಕಾರ್ಯಕ್ರಮದ ಮೂಲಕ “ವಿಪತ್ತು ಬಂದಾಗ ಮಾತ್ರ ಸಿದ್ಧರಾಗುವುದಕ್ಕಿಂತ ಮುಂಚೆಯೇ ಜಾಗೃತರಾಗಬೇಕು” ಎಂಬ ಸಂದೇಶವನ್ನು ಜಿಲ್ಲಾಡಳಿತ ಹಾಗೂ ಎನ್ ಡಿ ಆರ್ ಎಪ್ ಸ್ಪಷ್ಟವಾಗಿ ಸಾರಿತು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಾರ್ಯಕ್ರಮದಲ್ಲಿ ಮಾತನಾಡಿ, “ವಿಪತ್ತುಗಳು ಯಾವಾಗ ಬೇಕಾದರೂ ಸಂಭವಿಸಬಹುದು. ಆದರೆ ಅದಕ್ಕೆ ನಾವು ಸಿದ್ಧರಾಗಿದ್ದರೆ ನಷ್ಟವನ್ನು ಕಡಿಮೆ ಮಾಡಬಹುದು. ಜೀವ ಹಾನಿ ತಡೆಯಬಹುದು ಇದರಲ್ಲಿ ಸಾರ್ವಜನಿಕರ ಸಹಕಾರವೂ ಅಷ್ಟೇ ಮುಖ್ಯ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಪ್ರಾಚಾರ್ಯ ರೇಖಾ ಸೇನಾವಣೆ, ವಿಪತ್ತು ತಜ್ಞ ಶಿವಾನಂದ ರಾಜನಾಳ, ವಸಂತ ಮಡ್ಲೂರ, ಎನ್ ಡಿ ಆರ್ ಎಫ್ ಮುಖ್ಯಸ್ಥ ಕಮಲೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

*ಬಾಕ್ಸ್ :*

*ತುರ್ತು ಸಾಮಗ್ರಿಗಳ ಸರಿಯಾದ ಬಳಕೆ –*

ತುರ್ತು ಸಂದರ್ಭಗಳಲ್ಲಿ ಬಳಸುವ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಹಾಗೂ ಉಪಯುಕ್ತ ಮಾಹಿತಿ ನೀಡಲಾಯಿತು. ಎನ್‌ಡಿಆರ್‌ಎಫ್ ತಂಡವು ರಕ್ಷಣಾ ಕಾರ್ಯಗಳಲ್ಲಿ ಬಳಸುವ ವಿವಿಧ ಸಾಧನಗಳನ್ನು ಪರಿಚಯಿಸಿ, ಅವುಗಳನ್ನು ಯಾವ ಸಂದರ್ಭದಲ್ಲಿ ಹೇಗೆ ಬಳಸಬೇಕು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿತು. ಮುಖ್ಯವಾಗಿ ಸ್ಟ್ರೆಚರ್, ಕಟಿಂಗ್ ಟೂಲ್‌ಗಳು, ರೋಪ್‌ಗಳು, ಲೈಫ್ ಡಿಟೆಕ್ಷನ್ ಸಾಧನಗಳು ಸೇರಿದಂತೆ ಹಲವಾರು ಉಪಕರಣಗಳ ಬಳಕೆ ಕುರಿತು ವಿವರಿಸಲಾಯಿತು.

ಇದಲ್ಲದೆ, ಮನೆಮಟ್ಟದಲ್ಲೇ ತುರ್ತು ಕಿಟ್ (Emergency Kit) ಸಿದ್ಧವಾಗಿಟ್ಟುಕೊಳ್ಳುವ ಮಹತ್ವವನ್ನು ವಿವರಿಸಿ, ಅದರಲ್ಲಿ ಟಾರ್ಚ್, ಪ್ರಾಥಮಿಕ ಚಿಕಿತ್ಸೆ ಪೆಟ್ಟಿಗೆ, ಕುಡಿಯುವ ನೀರು, ಅಗತ್ಯ ಔಷಧಿಗಳು ಹಾಗೂ ಸಂಪರ್ಕ ಸಂಖ್ಯೆಗಳ ಪಟ್ಟಿಯನ್ನು ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

*ಬಾಕ್ಸ್ 2:*

*ನಾಯಿಯ ಚಾತುರ್ಯ-*

ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚುವಲ್ಲಿ ನಾಯಿ ತನ್ನ ಅದ್ಭುತ ಘ್ರಾಣ ಶಕ್ತಿಯನ್ನು ಬಳಸಿಕೊಂಡು ತಂಡಕ್ಕೆ ಸಹಕಾರ ನೀಡಿತು. ಕಣ್ಣಿಗೆ ಕಾಣದ ಸ್ಥಳದಲ್ಲಿರುವ ವ್ಯಕ್ತಿಯ ಅಸ್ತಿತ್ವವನ್ನು ಕೂಡ ಅದು ಶೀಘ್ರವಾಗಿ ಗುರುತಿಸಿ, ರಕ್ಷಣಾ ಸಿಬ್ಬಂದಿಗೆ ಸೂಚನೆ ನೀಡುವ ದೃಶ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು.

ನಾಯಿಯ ಕಾರ್ಯಕ್ಷಮತೆ ಮತ್ತು ತರಬೇತಿಯ ಮಟ್ಟವನ್ನು ನೋಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ರಕ್ಷಣಾ ಕಾರ್ಯದಲ್ಲಿ ಪ್ರಾಣಿಗಳ ಪಾತ್ರವೂ ಎಷ್ಟು ಮಹತ್ವದ್ದು ಎಂಬುದು ಈ ಮೂಲಕ ಸ್ಪಷ್ಟವಾಯಿತು.

Editor

Leave a comment