Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

“ಸವಿತಾ ಸಮಾಜದ ಸಾಲ ಮನ್ನಾಕ್ಕೆ ಆಗ್ರಹ ಗೃಹ ಸಚಿವರ ಭರವಸೆ ನಮಗೂ ಅನ್ವಯಿಸಲಿ – ಕೃಷ್ಣಾ ಹಡಪದ ಒತ್ತಾಯ”

ಕರುನಾಡು ಘರ್ಜನೆ ಸುದ್ದಿ ಗದಗ 10: “ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲಗಾರರಿಗೆ ನೀಡಿರುವ ರಿಯಾಯಿತಿಯನ್ನು ಸವಿತಾ ಸಮಾಜಕ್ಕೂ ವಿಸ್ತರಿಸಬೇಕು. ಕರೋನಾ ಕಾಲದಿಂದಲೂ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಲಕ್ಷಾಂತರ ಕ್ಷೌರಿಕ ಕುಟುಂಬಗಳನ್ನು ‘ವಿಶೇಷ ಪ್ರಕರಣ’ ಎಂದು ಪರಿಗಣಿಸಿ, ಅವರ ಸಾಲವನ್ನು ಸಂಪೂರ್ಣ ಮನ್ನಾ…

ಕರುನಾಡು ಘರ್ಜನೆ ಸುದ್ದಿ ಗದಗ 10: “ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲಗಾರರಿಗೆ ನೀಡಿರುವ ರಿಯಾಯಿತಿಯನ್ನು ಸವಿತಾ ಸಮಾಜಕ್ಕೂ ವಿಸ್ತರಿಸಬೇಕು. ಕರೋನಾ ಕಾಲದಿಂದಲೂ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಲಕ್ಷಾಂತರ ಕ್ಷೌರಿಕ ಕುಟುಂಬಗಳನ್ನು ‘ವಿಶೇಷ ಪ್ರಕರಣ’ ಎಂದು ಪರಿಗಣಿಸಿ, ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು,” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಅವರು ಸರ್ಕಾರಕ್ಕೆ ಮನವಿ ಮಾಡಿ ಒತ್ತಾಯಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಇತ್ತೀಚೆಗೆ ಮಾಧ್ಯಮ ಬಂಧುಗಳೊಂದಿಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಸಾಹೇಬರು, ಸಾಲ ತೀರಿಸಲು ಅಸಾಧ್ಯವಾಗಿರುವ ಅಸಹಾಯಕರನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಹಕರಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇದೇ ಮಾನವೀಯ ದೃಷ್ಟಿಕೋನವನ್ನು ಸವಿತಾ ಸಮಾಜದ ಕುಲಕಸುಬುದಾರರ ವಿಷಯದಲ್ಲೂ ತೋರಬೇಕು ಎಂಬುದು ಗದಗ ಜಿಲ್ಲಾ ಸವಿತಾ ಸಮಾಜದ ಪ್ರಬಲ ಒತ್ತಾಯವಾಗಿದೆ ಎಂದರು
ಕರೋನಾ ಲಾಕ್‌ಡೌನ್‌ ನಿಂದಾಗಿ ರಾಜ್ಯದ ಸಾವಿರಾರು ಕ್ಷೌರಿಕರು ತಮ್ಮ ಸ್ವಂತ ಅಂಗಡಿಗಳನ್ನು ಕಳೆದುಕೊಂಡು ಇಂದು ಅತಂತ್ರರಾಗಿದ್ದಾರೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪಡೆದ ಸಾಲಗಳು ಬಡ ಕುಟುಂಬಗಳಿಗೆ ಹೊರೆಯಾಗಿದ್ದು, ಅವುಗಳನ್ನು ಮನ್ನಾ ಮಾಡಿ ಅವರನ್ನು ಸಾಲಮುಕ್ತಗೊಳಿಸಬೇಕು.
ಬಜೆಟ್ ಘೋಷಣೆಯಂತೆ ನೀಡಲಾಗುವ ₹10 ಲಕ್ಷದವರೆಗಿನ ಸಾಲಕ್ಕೆ ಕನಿಷ್ಠ ಶೇ. 50ರಷ್ಟು ಸಬ್ಸಿಡಿ ನೀಡುವ ಮೂಲಕ ಸಣ್ಣ ಉದ್ಯಮಿಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು.
ಈ ಕುರಿತು ಗದಗ ಜಿಲ್ಲಾಧಿಕಾರಿಗಳ ಮೂಲಕ ಕೆಲವೇ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಅರ್ಪಿಸಲಾಗುವುದು
“ಸಮಾಜದ ಈ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ, ರಾಜ್ಯಾದ್ಯಂತ ಸವಿತಾ ಸಮಾಜದ ಬಾಂಧವರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಎಚ್ಚರಿಸಿದ್ದಾರೆ.

Editor

Leave a comment