Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ l ಗದಗ ಸಫಾಯಿ ಕರ್ಮಚಾರಿಗಳ ಕಲ್ಯಾಣ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ.

ಜಿಲ್ಲಾ ಮಟ್ಟದ ಸಪಾಯಿ ಕರ್ಮಚಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ  ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 28: ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ…

ಜಿಲ್ಲಾ ಮಟ್ಟದ ಸಪಾಯಿ ಕರ್ಮಚಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ 

ಕರುನಾಡು ಘರ್ಜುನೆ ಸುದ್ದಿ ಗದಗ ಮಾರ್ಚ 28: ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಫಾಯಿ ಕರ್ಮಚಾರಿಗಳ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮತ್ತು ಅಗತ್ಯ ವೈದ್ಯಕೀಯ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಪ್ರತಿಯೊಬ್ಬ ಕರ್ಮಚಾರಿಗೂ ಆಧುನಿಕ ಸುರಕ್ಷತಾ ಪರಿಕರಗಳಾದ ಗ್ಲೌಸ್, ಮಾಸ್ಕ್, ಬೂಟು ಮತ್ತು ಸಮವಸ್ತ್ರಗಳನ್ನು ವಿಳಂಬವಿಲ್ಲದೆ ಒದಗಿಸಲು ಸೂಚಿಸಲಾಯಿತು.

ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ಮತ್ತು ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು ಕರ್ಮಚಾರಿಗಳ ಮಾಸಿಕ ವೇತನವನ್ನು ನಿಗದಿತ ಸಮಯದಲ್ಲಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದು ಮತ್ತು ಪ್ರತಿಯೊಬ್ಬರಿಗೂ ವಿಮಾ ಸೌಲಭ್ಯ ಖಚಿತ ಪಡಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು

ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಕರ್ಮಚಾರಿಗಳು ನೇರವಾಗಿ ನಮ್ಮ ಗಮನಕ್ಕೆ ತರಬಹುದು ಎಂದು ತಿಳಿಸಿದರು. ಸಫಾಯಿ ಕರ್ಮಚಾರಿಗಳಿಗೆ ಮೀಸಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಅರ್ಹರಿಗೆ ಮನೆಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಸಫಾಯಿ ಕರ್ಮಚಾರಿಗಳ ಸಂಘದ ನಾಮನಿರ್ದೇಶಿತ ಸದಸ್ಯರಾದ ಎಸ್. ಎನ್. ಬಳ್ಳಾರಿ, ಬಿಳೆಯಲಿ, ಶರಣಪ್ಪ ಮೂಕಪ್ಪ ಪೂಜಾರ, ಶ್ರೀಮತಿ ರೇಣುಕಾ.ಸು. ದೊಡ್ಡಮನಿ, ಶ್ರೀಮತಿ ಅಂಜನಾದೇವಿ.ಎಮ್. ಮ್ಯಾಗೇರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ, ಆರೋಗ್ಯ ತಪಾಸಣೆ, ವೇತನ ಪಾವತಿ ಮತ್ತು ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸವಾಲುಗಳು, ವೇತನ ವಿಳಂಬ, ಆರೋಗ್ಯ ಸುರಕ್ಷತೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳ ಅನುಷ್ಠಾನದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.

Editor

Leave a comment