Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಸವಿತಾ ಸಮಾಜದ ಕುಲಕಸುಬಿಗೆ ಕನ್ನ ಹಾಕುವ ಪ್ರಯತ್ನಕ್ಕೆ ಜಿಲ್ಲಾಧಿಕಾರಿಗಳಿಂದ ಬ್ರೇಕ್: ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತರಾಟೆ.

ಕರುನಾಡು ಘರ್ಜನೆ ಸುದ್ದಿ ಗದಗ 06: ಸವಿತಾ ಸಮಾಜದ ಸಾಂಪ್ರದಾಯಿಕ ‘ಕ್ಷೌರಿಕ’ ವೃತ್ತಿಯ ಅಸ್ಮಿತೆಯನ್ನು ಕಾಪಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸವಿತಾ ಸಮಾಜದ ಗದಗ ಜಿಲ್ಲಾ ಘಟಕದ ವತಿಯಿಂದ ಇಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಬಲಿಷ್ಠ ಮನವಿ ಸಲ್ಲಿಸಲಾಯಿತು.ಸಮಾಜದ ನೋವಿಗೆ ತಕ್ಷಣ ಸ್ಪಂದಿಸಿದ…

ಕರುನಾಡು ಘರ್ಜನೆ ಸುದ್ದಿ ಗದಗ 06: ಸವಿತಾ ಸಮಾಜದ ಸಾಂಪ್ರದಾಯಿಕ ‘ಕ್ಷೌರಿಕ’ ವೃತ್ತಿಯ ಅಸ್ಮಿತೆಯನ್ನು ಕಾಪಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸವಿತಾ ಸಮಾಜದ ಗದಗ ಜಿಲ್ಲಾ ಘಟಕದ ವತಿಯಿಂದ ಇಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಬಲಿಷ್ಠ ಮನವಿ ಸಲ್ಲಿಸಲಾಯಿತು.ಸಮಾಜದ ನೋವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ತಪ್ಪಿತಸ್ಥ ಅಧಿಕಾರಿಗಳಿಗೆ ಸ್ಥಳದಲ್ಲೇ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ, “ಅಸಂಘಟಿತ ಕಾರ್ಮಿಕ ಮಂಡಳಿಯು ಸವಿತಾ ಸಮಾಜದವರ ಕುಲಕಸುಬಾದ ‘ಕ್ಷೌರಿಕ’ (ಬಾರ್ಬರ್) ವೃತ್ತಿಯ ಹೆಸರನ್ನು ಅನ್ಯ ಸಮಾಜದವರು ನಡೆಸುವ ಬ್ಯೂಟಿ ಪಾರ್ಲರ್‌ಗಳಿಗೂ ನೀಡುತ್ತಿರುವುದು ಖಂಡನೀಯ. ಇದರಿಂದ ನಮ್ಮ ಸಮಾಜದ ನೈಜ ಫಲಾನುಭವಿಗಳಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳು, ವಿಮೆ ಮತ್ತು ಆರ್ಥಿಕ ಪ್ಯಾಕೇಜ್‌ಗಳು ಅನ್ಯರ ಪಾಲಾಗುತ್ತಿವೆ. ಇದು ಸವಿತಾ ಸಮಾಜಕ್ಕೆ ಮಾಡುತ್ತಿರುವ ದ್ರೋಹ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
*ಜಿಲ್ಲಾಧಿಕಾರಿಗಳ ಕಡಕ್ ಎಚ್ಚರಿಕೆ*
ಮನವಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಮಾನ್ಯ ಜಿಲ್ಲಾಧಿಕಾರಿಗಳು, ಬ್ಯೂಟಿ ಪಾರ್ಲರ್ ಮಾಡುವವರಿಗೆ ‘ಬ್ಯೂಟಿಷಿಯನ್’ ಎಂದೇ ಕಾರ್ಡ್ ನೀಡಬೇಕು ಮತ್ತು ಸವಿತಾ ಸಮಾಜದವರಿಗೆ ಮಾತ್ರ ‘ಕ್ಷೌರಿಕ’ (ಬಾರ್ಬರ್) ಎಂದು ನಮೂದಿಸಬೇಕು ಎಂದು ಸ್ಪಷ್ಟಪಡಿಸಿದರು.
ಅಲ್ಲದೆ, ನಿಯಮ ಉಲ್ಲಂಘಿಸಿ ಇತರರಿಗೆ ‘ಬಾರ್ಬರ್’ ಕಾರ್ಡ್ ನೀಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತಕ್ಷಣವೇ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂತಹ ಎಲ್ಲಾ ಕಾರ್ಡ್‌ಗಳೊಂದಿಗೆ ಕಚೇರಿಗೆ ಬಂದು ವಿವರಣೆ ನೀಡುವಂತೆ ಖಡಕ್ ಎಚ್ಚರಿಕೆ ನೀಡಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ.
*ಸಮಾಜದ ಎಚ್ಚರಿಕೆ*
“ನಮ್ಮ ಸಮಾಜದ ಹಕ್ಕನ್ನು ಕಸಿಯುವ ಯಾವುದೇ ಪ್ರಯತ್ನ ನಡೆದರೆ ನಾವು ಸುಮ್ಮನಿರುವುದಿಲ್ಲ. ಜಿಲ್ಲಾಧಿಕಾರಿಗಳ ಈ ತಕ್ಷಣದ ಸ್ಪಂದನೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ತಂತ್ರಾಂಶದಲ್ಲಿ ಬದಲಾವಣೆ ತಂದು ನೈಜ ಸವಿತಾ ಸಮಾಜದವರಿಗೆ ಮಾತ್ರ ‘ಕ್ಷೌರಿಕ’ ಕಾರ್ಡ್ ದೊರೆಯುವಂತಾಗಬೇಕು,” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಒತ್ತಾಯಿಸಿದರು.
ಈ ಪ್ರತಿಭಟನಾತ್ಮಕ ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಶ್ರೀ ಸಂತ ಸೇನಾ ಮಹಾರಾಜ್ ನಾಬಿಕ್ ಮರಾಠ (ಸವಿತಾ) ಸಮಾಜದ ಅಧ್ಯಕ್ಷರಾದ ವಿಕಾಸ ಕ್ಷೀರಸಾಗರ್. ಸವಿತಾ ಸಮಾಜದ ಹಿರಿಯರಾದ ಹನುಮಂತಪ್ಪ ರಾಂಪುರ ಸಮಾಜದ ಯುವ ನಾಯಕರಾದ ಆನಂದ ಮಾನೆ ಜಿಲ್ಲಾ ಸಮಿತಿಯ ಪ್ರಮುಖ ಪದಾಧಿಕಾರಿಗಳು ಹಾಗೂ ಸಮಾಜ ಅನೇಕ ಬಾಂಧವರು ಉಪಸ್ಥಿತರಿದ್ದರು.

ಕೃಷ್ಣಾ ಎಚ್ ಹಡಪದ
9845650612

Editor

Leave a comment