Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಗದಗ | ವ್ಯವಸ್ಥೆಯ ವಿರುದ್ಧದ ಹೋರಾಟಕ್ಕೆ ಅಂಬೇಡ್ಕರ್ ವಿಚಾರಗಳೇ ನಮಗೆ ದಾರಿದೀಪ: ಜಿಲ್ಲಾಧ್ಯಕ್ಷ ಕೃಷ್ಣಾ ಹಡಪದ ಕ್ರಾಂತಿಕಾರಿ ಕರೆ

ಕರುನಾಡು ಘರ್ಜನೆ ಸುದ್ದಿ ಗದಗ 15: “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ನೀಡಿಲ್ಲ, ಬದಲಿಗೆ ಘನತೆಯಿಂದ ಬದುಕುವ ಅಸ್ತ್ರವನ್ನು ನೀಡಿದೆ. ವ್ಯವಸ್ಥೆಯ ಶೋಷಣೆಯ ವಿರುದ್ಧ ಸಿಡಿದೇಳಲು ಮತ್ತು ಸಮಾಜದ ಮುಖ್ಯವಾಹಿನಿಯಲ್ಲಿ ಸವಿತಾ ಸಮಾಜ ಸಶಕ್ತವಾಗಿ…

ಕರುನಾಡು ಘರ್ಜನೆ ಸುದ್ದಿ ಗದಗ 15: “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ನೀಡಿಲ್ಲ, ಬದಲಿಗೆ ಘನತೆಯಿಂದ ಬದುಕುವ ಅಸ್ತ್ರವನ್ನು ನೀಡಿದೆ. ವ್ಯವಸ್ಥೆಯ ಶೋಷಣೆಯ ವಿರುದ್ಧ ಸಿಡಿದೇಳಲು ಮತ್ತು ಸಮಾಜದ ಮುಖ್ಯವಾಹಿನಿಯಲ್ಲಿ ಸವಿತಾ ಸಮಾಜ ಸಶಕ್ತವಾಗಿ ಗುರುತಿಸಿಕೊಳ್ಳಲು ಅಂಬೇಡ್ಕರ್ ಅವರ ಕ್ರಾಂತಿಕಾರಿ ವಿಚಾರಗಳೇ ನಮಗೆ ಸ್ಫೂರ್ತಿ” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಗುಡುಗಿದರು.

ನಗರಸಭೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಸವಿತಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪುಷ್ಪ ನಮನ ಹಾಗೂ ಭವ್ಯ ಮಾಲಾರ್ಪಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು.

“ಅಂಬೇಡ್ಕರ್ ಅವರು ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರೆಯಬೇಕು ಎಂಬ ಆಶಯ ಹೊಂದಿದ್ದರು. ಆದರೆ ಇಂದಿಗೂ ಸವಿತಾ ಸಮಾಜದಂತಹ ಶ್ರಮಿಕ ವರ್ಗಗಳು ಕಡೆಗಣಿಸಲ್ಪಡುತ್ತಿವೆ. ನಾವು ಸಂಘಟಿತರಾಗುವ ಮೂಲಕ ನಮ್ಮ ಪಾಲಿನ ಸೌಲಭ್ಯಗಳನ್ನು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹೋರಾಟದ ಮೂಲಕ ಪಡೆದುಕೊಳ್ಳಬೇಕಿದೆ. ಶಿಕ್ಷಣ ಮತ್ತು ಸಂಘಟನೆ ಎಂಬ ಅಂಬೇಡ್ಕರ್ ಅವರ ಮಂತ್ರವೇ ನಮ್ಮ ಸಮುದಾಯದ ಪ್ರತಿಯೊಬ್ಬರ ಮಂತ್ರವಾಗಲಿ,” ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಮಾಜದ ಹಿರಿಯರಾದ ಹನುಮಂತಪ್ಪ ರಾಂಪೂರ, “ಅಂಬೇಡ್ಕರ್ ಅವರ ತತ್ವಗಳು ಯಾವುದೇ ಕಾಲಕ್ಕೂ ಅಪ್ರಸ್ತುತವಲ್ಲ. ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು,” ಎಂದರು.

ಸಾಮಾಜಿಕ ಕಾರ್ಯಕರ್ತ ಶೌಕತ್ ಕಾತರಿಕಿ ಮಾತನಾಡಿ, “ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಸವಿತಾ ಸಮಾಜವು ಜಾಗೃತವಾಗುತ್ತಿರುವುದು ಆಶಾದಾಯಕ ಬೆಳವಣಿಗೆ,” ಎಂದು ಬಣ್ಣಿಸಿದರು.

ಯುವ ನಾಯಕ ವಿನಾಯಕ ರಾಯಚೂರ ಮಾತನಾಡಿ, “ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ಯುವಶಕ್ತಿಯ ಮೂಲ ಉದ್ದೇಶವಾಗಬೇಕು,” ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ‘ಜೈ ಭೀಮ್’ ಘೋಷಣೆಗಳ ಮೂಲಕ ಅಂಬೇಡ್ಕರ್ ಅವರ ಸ್ಮರಣೆ ಮಾಡಿದರು. ಗದಗ ಜಿಲ್ಲಾ ಸವಿತಾ ಸಮಾಜದ ಗೌರವಾನ್ವಿತ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಯುವ ಘಟಕದ ಪದಾಧಿಕಾರಿಗಳು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.ಕೃಷ್ಣಾ ಎಚ್. ಹಡಪದ 9845650612

Editor

Leave a comment