Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ರಾಜಕೀಯದಲ್ಲಿ ಸದ್ದು ಮಾಡಿದ ಪ್ರಕರಣಕ್ಕೆ ಬಿಜೆಪಿ ಮುಖಂಡ ಹತ್ಯೆ ಪ್ರಕರಣಕ್ಕೆ ತೀರ್ಪು: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಹೇಳಿಕೆ..!

ಕರುನಾಡು ಘರ್ಜನೆ ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ…

ಕರುನಾಡು ಘರ್ಜನೆ ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ.

 

2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.

ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ

 

Editor

Leave a comment