Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರು I ಎಸ್ ಐ ಆರ್ ವಿರೋಧಿ ಸಮಾವೇಶಕ್ಕೆ ಬೆಂಬಲ : ವೆಲ್ಫೇರ್ ಪಾರ್ಟಿ.

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು:2026 ಏಪ್ರಿಲ್ 23ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 34 ಲಕ್ಷ ಮತದಾರರನ್ನು ಹೊರಗಿಟ್ಟು ಚುನಾವಣೆಯನ್ನು ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ. ಈ ಅನ್ಯಾಯವನ್ನು ತೀವ್ರವಾಗಿ ಖಂಡಿಸಿ, ಅದಕ್ಕೆ ವಿರೋಧವಾಗಿ ಅದೇ ದಿನ ಬೆಂಗಳೂರಿನ…

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು:2026 ಏಪ್ರಿಲ್ 23ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 34 ಲಕ್ಷ ಮತದಾರರನ್ನು ಹೊರಗಿಟ್ಟು ಚುನಾವಣೆಯನ್ನು ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ. ಈ ಅನ್ಯಾಯವನ್ನು ತೀವ್ರವಾಗಿ ಖಂಡಿಸಿ, ಅದಕ್ಕೆ ವಿರೋಧವಾಗಿ ಅದೇ ದಿನ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ವೆಲ್ಫೇರ್ ಪಾರ್ಟಿ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ತಿಳಿಸಿದ್ದಾರೆ.

ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿ, ಈಗಾಗಲೇ ಹನ್ನೆರಡು ರಾಜ್ಯಗಳಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 6.5 ಕೋಟಿ ಮತದಾರರ ಹೆಸರುಗಳನ್ನು ತೆರವುಗೊಳಿಸಲಾಗಿದೆ. ಮುಂದಿನ ರಾಜ್ಯಗಳಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಇನ್ನೂ 6 ರಿಂದ 8 ಕೋಟಿ ಮತದಾರರ ಹೆಸರುಗಳು ಹೊರಗುಳಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಪ್ರಕ್ರಿಯೆಯಿಂದ ಹೆಚ್ಚಾಗಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ತಮ್ಮ ಸಂವಿಧಾನಿಕ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದ ಮಣಿಕ್‌ಚಕ್ ಕ್ಷೇತ್ರದಲ್ಲಿ ಹಿಂದೂ ಮತ್ತು ಮುಸ್ಲಿಂ ಮತದಾರರ ಸಂಖ್ಯೆ ಸಮಾನವಾಗಿದ್ದರೂ, “ಅಡ್ಜುಡಿಕೇಶನ್ ಅಡಿಯಲ್ಲಿ” (ಅನುಮಾನಾಸ್ಪದ ಪಟ್ಟಿಯಲ್ಲಿ) ಇರಿಸಲ್ಪಟ್ಟವರಲ್ಲಿ 97.4% ಮುಸ್ಲಿಮರು ಆಗಿದ್ದಾರೆ. ಅದೇ ರೀತಿ, ಮೊಥಾಬಾರಿ ಕ್ಷೇತ್ರದಲ್ಲಿ 69.5% ಮುಸ್ಲಿಂ ಮತದಾರರಿದ್ದು, ಅವರಲ್ಲಿ 97.4% ಜನರನ್ನು “ಅಡ್ಜುಡಿಕೇಶನ್ ಅಡಿಯಲ್ಲಿ” ಸೇರಿಸಲಾಗಿದೆ. ಸಂಶೇರ್ಗಂಜ್ ಕ್ಷೇತ್ರದಲ್ಲಿ 82% ಮುಸ್ಲಿಂ ಮತದಾರರಿದ್ದು, “ಅಡ್ಜುಡಿಕೇಶನ್ ಅಡಿಯಲ್ಲಿ” ಇರುವವರಲ್ಲಿ 98.8% ಮುಸ್ಲಿಮರು ಆಗಿದ್ದಾರೆ.

ಈ ಎಲ್ಲಾ ಕ್ಷೇತ್ರಗಳನ್ನು ಒಟ್ಟುಗೂಡಿಸಿದಾಗ, ಒಟ್ಟು ಮತದಾರರಲ್ಲಿ ಮುಸ್ಲಿಮರು 51.7% ಇದ್ದರೂ, “ಅಡ್ಜುಡಿಕೇಶನ್ ಅಡಿಯಲ್ಲಿ” ಇರುವವರಲ್ಲಿ 92.6% ಮುಸ್ಲಿಮರು ಇದ್ದಾರೆ. ಒಟ್ಟಾರೆ ಮುಸ್ಲಿಂ ಅಡ್ಜುಡಿಕೇಶನ್ ದರ 42.2% ಆಗಿದ್ದು, ಪ್ರತಿ 100 ಮುಸ್ಲಿಂ ಮತದಾರರಲ್ಲಿ 42 ಕ್ಕಿಂತ ಹೆಚ್ಚು ಮಂದಿ ಈ ಪಟ್ಟಿಯಲ್ಲಿ ಸೇರಿದ್ದಾರೆ. ಇದರ ವಿರುದ್ಧವಾಗಿ, ಹಿಂದೂಗಳ ಅಡ್ಜುಡಿಕೇಶನ್ ದರ ಕೇವಲ 3.5% ಮಾತ್ರವಾಗಿದೆ. ಈ ಅಂಕಿಅಂಶಗಳು ಪ್ರಕ್ರಿಯೆಯಲ್ಲಿ ಗಂಭೀರ ಅಸಮತೋಲನವಿದೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

ಹೀಗೆ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿರುವುದು ಚಿಂತಾಜನಕವಾಗಿದೆ. ನಮ್ಮ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಯಾವುದೇ ಕಾರಣಕ್ಕೂ ಉಂಟಾಗಬಾರದು. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ತಕ್ಷಣ ನಿಲ್ಲಿಸಬೇಕು ಎಂಬ ಆಗ್ರಹದೊಂದಿಗೆ, ಏಪ್ರಿಲ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ವೆಲ್ಫೇರ್ ಪಾರ್ಟಿ ಸಕ್ರಿಯವಾಗಿ ಭಾಗವಹಿಸುತ್ತದೆ.

ಸಂವಿಧಾನ ಪ್ರಿಯ ಎಲ್ಲ ನಾಗರಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸಬೇಕೆಂದು ಅವರು ಕರೆ ನೀಡಿದ್ದಾರೆ.

Editor

Leave a comment