Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ಬೇಸಿಗೆಯಲ್ಲಿ ಆರೋಗ್ಯದ ರಕ್ಷಣೆಗೆ ಮುಂಜಾಗ್ರತೆ ವಹಿಸಿ : ಡಾ. ಎಸ್ ಎಸ್ ನೀಲಗುಂದ.

ಕರುನಾಡು ಘರ್ಜುನೆ ಸುದ್ದಿ ಗದಗ, ಎಪ್ರಿಲ್ 21 : ಗದಗ ಜಿಲ್ಲೆಯಾದ್ಯಂತ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬAದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ತಮ್ಮ ಆರೋಗ್ಯದ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ…

ಕರುನಾಡು ಘರ್ಜುನೆ ಸುದ್ದಿ ಗದಗ, ಎಪ್ರಿಲ್ 21 : ಗದಗ ಜಿಲ್ಲೆಯಾದ್ಯಂತ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬAದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ತಮ್ಮ ಆರೋಗ್ಯದ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಎಸ್ ನೀಲಗುಂದ ಅವರು ತಿಳಿಸಿದ್ದಾರೆ.

ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಸಂದರ್ಭದಲ್ಲಿ ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಲ್ಲಾ ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದ್ದು, ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು.

ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ.

ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ.

ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108/102 ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Editor

Leave a comment