Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಖಾಕಿ ಗೌರವಕ್ಕೆ ಸ್ತ್ರೀಶಕ್ತಿಯ ನಮನ: ದಾರಿದೀಪ ಸಂಸ್ಥೆಯಿಂದ ಮಹಿಳಾ ಪೊಲೀಸ್ ಅಧಿಕಾರಿ ಚೆನ್ನಮ್ಮ ಕರ್ನಾಲ್ ಅವರಿಗೆ ಸನ್ಮಾನ

ಕರುನಾಡು ಘರ್ಜನೆ ಸುದ್ದಿ ಗದಗ 22: “ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಹಿಳೆ ಕೇವಲ ಕುಟುಂಬದ ಕೊಂಡಿಯಲ್ಲ, ಅವಳು ಇಡೀ ಸಮಾಜದ ಭದ್ರತೆಯ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾಳೆ. ಖಾಕಿ ವಸ್ತ್ರದ ಘನತೆಯನ್ನು ಎತ್ತಿಹಿಡಿಯುತ್ತಿರುವ ಮಹಿಳಾ ಅಧಿಕಾರಿಗಳು ಬದಲಾವಣೆಯ ಹರಿಕಾರರು,” ಎಂದು ದಾರಿದೀಪ ಮಹಿಳಾ ವಿವಿಧೋದ್ದೇಶ…

ಕರುನಾಡು ಘರ್ಜನೆ ಸುದ್ದಿ ಗದಗ 22: “ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಹಿಳೆ ಕೇವಲ ಕುಟುಂಬದ ಕೊಂಡಿಯಲ್ಲ, ಅವಳು ಇಡೀ ಸಮಾಜದ ಭದ್ರತೆಯ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾಳೆ. ಖಾಕಿ ವಸ್ತ್ರದ ಘನತೆಯನ್ನು ಎತ್ತಿಹಿಡಿಯುತ್ತಿರುವ ಮಹಿಳಾ ಅಧಿಕಾರಿಗಳು ಬದಲಾವಣೆಯ ಹರಿಕಾರರು,” ಎಂದು ದಾರಿದೀಪ ಮಹಿಳಾ ವಿವಿಧೋದ್ದೇಶ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಮುಳುಗುಂದ ಅವರು ಅಭಿಪ್ರಾಯಪಟ್ಟರು.
ನಾಗರಿಕ ಸೇವಾ ದಿನದ ಅಂಗವಾಗಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗಾಗಿ ನಿಷ್ಠೆಯಿಂದ ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಶ್ರೀಮತಿ ಚೆನ್ನಮ್ಮ ಕರ್ನಾಲ್ ಅವರನ್ನು ಸನ್ಮಾನಿಸುವ ಮೂಲಕ ಗದಗಿನ ದಾರಿದೀಪ ಮಹಿಳಾ ವಿವಿಧೋದ್ದೇಶ ಸಂಸ್ಥೆಯು ಒಂದು ಅರ್ಥಪೂರ್ಣ ಸಂದೇಶವನ್ನು ಸಾರಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ಶಕುಂತಲಾ ಮುಳುಗುಂದ ಅವರು ಮಾತನಾಡಿ, “ಸಮರ್ಥ ಆಡಳಿತ ಮತ್ತು ಜನಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಮಹಿಳೆಯರ ಸಹಾನುಭೂತಿ ಹಾಗೂ ಧೈರ್ಯ ಅತ್ಯಂತ ಅವಶ್ಯಕ. ಚೆನ್ನಮ್ಮ ಕರ್ನಾಲ್ ಅವರಂತಹ ಕರ್ತವ್ಯನಿಷ್ಠ ಅಧಿಕಾರಿಗಳು ಇಂದಿನ ಯುವತಿಯರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಸವಾಲುಗಳನ್ನು ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರುವ ಮೂಲಕ ಅವರು ಸಮಾಜಕ್ಕೆ ಹೊಸ ದಿಕ್ಕನ್ನು ತೋರುತ್ತಿದ್ದಾರೆ,” ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶ್ರೀಮತಿ ಜ್ಯೋತಿ ದೇಸಾಯಿಗೌಡರ್, ಶ್ರೀಮತಿ ವಿಜಯಲಕ್ಷ್ಮಿ ಅಸೂಟಿ, ಶ್ರೀಮತಿ ದೀಪಾ ಹನುಮಂತ ಗೌಡರ ಹಾಗೂ ಶ್ರೀಮತಿ ಪ್ರೀತಿ ಶಿವಪ್ಪನಮಠ ಅವರುಗಳು ಮಾತನಾಡಿ, “ವೃತ್ತಿ ಮತ್ತು ಪ್ರವೃತ್ತಿಗಳ ನಡುವೆ ಸಮತೋಲನ ಕಾಯ್ದುಕೊಂಡು ನಾಗರಿಕ ಸೇವೆಯಲ್ಲಿ ತೊಡಗಿರುವ ಮಹಿಳೆಯರ ಶ್ರಮ ಶ್ಲಾಘನೀಯ. ಇಂತಹ ಸನ್ಮಾನಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಬಲ್ಲವು,” ಎಂದು ಹಿತನುಡಿಗಳನ್ನು ಹಂಚಿಕೊಂಡರು.
ಸನ್ಮಾನ ಸ್ವೀಕರಿಸಿದ ಶ್ರೀಮತಿ ಚೆನ್ನಮ್ಮ ಕರ್ನಾಲ್ ಅವರು ಮಾತನಾಡಿ, “ಸಮಾಜ ಮತ್ತು ಸಂಘಟನೆಗಳು ನೀಡುವ ಈ ಗೌರವವು ನನ್ನ ಕರ್ತವ್ಯದ ಮೇಲಿನ ನಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಿದೆ,” ಎಂದು ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮವು ಮಹಿಳಾ ಸಬಲೀಕರಣದ ಮಹತ್ವ ಹಾಗೂ ಸಮಾಜದ ರಕ್ಷಣೆಯಲ್ಲಿ ಮಹಿಳೆಯರ ಅನಿವಾರ್ಯತೆಯನ್ನು ಸಾರುವ ಮೂಲಕ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಕೃಷ್ಣಾ ಗದಗ
9845650612

Editor

Leave a comment