Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ದಿವಾಳಿಯಾಗುವ ಮುನ್ನ ಸಚಿವರು ಎಚ್ಚೆತ್ತುಕೊಳ್ಳಲಿ -ಶಿವಾನಂದ ತಮ್ಮಣ್ಣವರ

ಕರುನಾಡು ಘರ್ಜನೆ ಸುದ್ದಿ ಗದಗ-೨೩ : ಗದಗ ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟದ ಎಲ್ಲ ಸೌಲಭ್ಯಗಳೊಂದಿಗೆ ಅನೂಕುಲವಾಗುತ್ತಿರುವ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಧ್ಯದ ಪರಿಸ್ಥಿತಿ ಗಮನಿಸಿದರೆ ಈಗಿನ ನಿರ್ದೇಶಕರು ಸಂಸ್ಥೆಯನ್ನು ದಿವಾಳಿ ಎಬ್ಬಿಸುತ್ತಿದ್ದಾರೆ. ಇಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ-೨೩ : ಗದಗ ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟದ ಎಲ್ಲ ಸೌಲಭ್ಯಗಳೊಂದಿಗೆ ಅನೂಕುಲವಾಗುತ್ತಿರುವ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಧ್ಯದ ಪರಿಸ್ಥಿತಿ ಗಮನಿಸಿದರೆ ಈಗಿನ ನಿರ್ದೇಶಕರು ಸಂಸ್ಥೆಯನ್ನು ದಿವಾಳಿ ಎಬ್ಬಿಸುತ್ತಿದ್ದಾರೆ. ಇಲ್ಲಿ ಸೂಕ್ಷ್ಮವಾಗಿ ಗಮನಿಸಬೇಕಾದ ಅಂಶವೆAದರೆ ಅಕ್ರಮ ನೇಮಕಾತಿ, ಕಳಪೆಮಟ್ಟದ ಔಷಧಿ, ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ಮಾಲ್, ದಲಿತರ ಮೇಲೆ ದೌರ್ಜನ್ಯ, ಮಹಿಳಾ ಅಧಿಕಾರಿಗಳ ಮೇಲೆ ದೌರ್ಜನ್ಯ, ಸರ್ಕಾರಿ ವಾಹನಗಳ ದುರ್ಬಳಕೆ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬಹುದೊಡ್ಡದಿದೆ.
ಈಗಾಗಲೇ ನಿರ್ದೇಶಕರ ಮೇಲೆ ಲೋಕಾಯುಕ್ತ ಕಚೇರಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಪ್ರಕರಣಗಳು ದಾಖಲಾಗಿವೆ ಇನ್ನೂ ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಹಾಗಾಗಿ ಅರ್ಹತೆ ಇಲ್ಲದಿದ್ದರೂ ನಿರ್ದೇಶಕರ ಸ್ಥಾನ ನೀಡಿದ್ದಾರೆ. ಈಗಾಗಲೇ ಇವರ ಅಧಿಕಾರಾವಧಿ ಪೂರ್ಣಗೊಂಡರು ಇನ್ನೂ ಇವರನ್ನೇ ಮುಂದುವರೆಸಿರುವುದನ್ನು ಗಮನಿಸಿದರೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಕಾನೂನು ಸಚಿವರು ಹಾಗೂ ಗದಗ ಜಿಲ್ಲೆಯ ಸಚಿವರಾದ ಮಾನ್ಯ ಎಚ್.ಕೆ.ಪಾಟೀಲ್ ಸಾಹೇಬರು ಸಾರ್ವಜನಿಕರ ಅನುಕೂಲಕ್ಕಾಗಿ ಈ ಸಂಸ್ಥೆಗೆ ಹಲವಾರು ಯೋಜನೆಗಳನ್ನು ತಂದಿದ್ದು, ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿರುತ್ತಾರೆ. ಕಾರಣ ಕೂಡಲೇ ನಿರ್ದೇಶಕರು ನಡೆಸಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಸಂಸ್ಥೆಯು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿರುವುದನ್ನು ತಪ್ಪಿಸಬೇಕೆಂದು ಗದಗ ಜಿಲ್ಲೆಯ ಸಾರ್ವಜನಿಕರ ಪರವಾಗಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ.
ಅರ್ಹತೆ ಇಲ್ಲದ ನಿರ್ದೇಶಕರನ್ನು ಈ ಕೂಡಲೇ ತೆಗೆದು ಹಾಕಿ ಅರ್ಹತೆ ಇರುವ ಹಿರಿಯ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಸಮಿತಿಯ ಜಿಲ್ಲಾಧ್ಯಕ್ಷರಾದ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Editor

Leave a comment