ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯಲ್ಲಿ ಹೃದಯ ಕಲುಕುವ ಅಪಘಾತ ಸಂಭವಿಸಿದೆ. ಲಕ್ಷ್ಮೀಶ್ವರ ಪಟ್ಟಣದಲ್ಲಿ ಬೆಳಗಿನ ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ವೇಗವಾಗಿ ಬಂದ ಕಾರೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಮಾಡಳ್ಳಿ ಗ್ರಾಮದ ಅಶೋಕ ಸರವಿ (52) ಹಾಗೂ ಆಟೋ ಚಾಲಕ ಶಿವಾನಂದ ಹುಲಕೋಟಿ (50) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಶಿಕ್ಷಕ ಎಂ.ಎಸ್. ಚಾಕಲಬ್ಬಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಅಶೋಕ ಸರವಿ ಅವರು ಅಕ್ಕಿಗುಂದ ತಾಂಡಾದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.