ಕರುನಾಡು ಘರ್ಜುನೆ ಸುದ್ದಿ ಗದಗ ರೋಣ ತಾಲೂಕಿನ ಪಿ ಡಿ ಒ ಮುಕ್ತಂಹುಸೇನ್ ಆತ್ಮಹತ್ಯೆ : ರೋಣ ತಾಲೂಕಿನ ಕೊತಬಾಳ ಹಾಗೂ ಅಸೂಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ )ಮುಕ್ತಂಹುಸೇನ್ ಕರಡಿಗುಡ್ಡ (46) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ (PDO Suicide ) ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ ಇವರು ಮೂಲತಃ ಧಾರವಾಡ ಜಿಲ್ಲೆಯವರಾದ ಇವರು, ಕಳೆದ ತಿಂಗಳಷ್ಟೇ ಕೊತಬಾಳ ಪಂಚಾಯಿತಿಯ ಪಿಡಿಒ ಆಗಿ ಅಧಿಕಾರ ವಹಿಸಿಕೊಂಡಿದ್ದರು. 2022-23ನೇ ಸಾಲಿನಲ್ಲಿ ಇವರ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು.
ಅಂದಿನಿಂದಲೂ ಈ ಪ್ರಕರಣದ ಬಗ್ಗೆ ತೀವ್ರವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದ ಅವರು ಸದಾ ಚಿಂತಿತರಾಗಿರುತ್ತಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಬೆಳಕಿಗೆ ಬಂದಿದ್ದು ಹೇಗೆ?
ಕಳೆದ ಎರಡು ದಿನಗಳಿಂದ ಕರಡಿಗುಡ್ಡ ಅವರು ಪತ್ನಿಯ ಯಾವುದೇ ಕರೆಗೆ ಸ್ಪಂದಿಸಿರಲಿಲ್ಲ. ಇದರಿಂದ ಆತಂಕಗೊಂಡ ಪತ್ನಿ, ಪತಿ ವಾಸವಿದ್ದ ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ವಿಚಾರಿಸುವಂತೆ ವಿನಂತಿಸಿದ್ದರು. ಮಾಲೀಕರು ಮನೆಗೆ ಹೋಗಿ ಪರಿಶೀಲಿಸಿದಾಗ ಆತ್ಮಹತ್ಯೆಯ ಕೃತ್ಯ ಬೆಳಕಿಗೆ ಬಂದಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ,(ಏಜೆನ್ಸಿಸ್).