Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಅತಿಥಿ ಉಪನ್ಯಾಸಕರ ಹೆಸರನ್ನು ಬದಲಾಯಿಸಿದ ಮಾತ್ರಕ್ಕೆ ಹೊಟ್ಟೆ ತುಂಬುವುದಿಲ್ಲ – “ಕಾಯಂ” ಬೇಡಿಕೆಗೆ “ಅತಿಥಿ”ಗಳ ಪಟ್ಟು ಡಾ. ಹನುಮಂತಗೌಡ ಆರ್. ಕಲ್ಮನಿ . .

ಕರುನಾಡು ಘರ್ಜುನೆ ಸುದ್ದಿ ಗದಗ : ಅತಿಥಿ ಉಪನ್ಯಾಸಕರ ಹೆಸರನ್ನು ಬದಲಾಯಿಸಿದ ಮಾತ್ರಕ್ಕೆ ಹೊಟ್ಟೆ ತುಂಬುವುದಿಲ್ಲ ಡಾ. ಹನುಮಂತಗೌಡ ಆರ್. ಕಲ್ಮನಿ – “ಕಾಯಂ” ಬೇಡಿಕೆಗೆ “ಅತಿಥಿ”ಗಳ ಪಟ್ಟು -ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಕಾಯಂಗೆ ಸಲಹೆ ನೀಡಿದ್ದ ಸಿದ್ದರಾಮಯ್ಯ ಉನ್ನತ…

ಕರುನಾಡು ಘರ್ಜುನೆ ಸುದ್ದಿ ಗದಗ : ಅತಿಥಿ ಉಪನ್ಯಾಸಕರ ಹೆಸರನ್ನು ಬದಲಾಯಿಸಿದ ಮಾತ್ರಕ್ಕೆ ಹೊಟ್ಟೆ ತುಂಬುವುದಿಲ್ಲ ಡಾ. ಹನುಮಂತಗೌಡ ಆರ್. ಕಲ್ಮನಿ – “ಕಾಯಂ” ಬೇಡಿಕೆಗೆ “ಅತಿಥಿ”ಗಳ ಪಟ್ಟು -ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಕಾಯಂಗೆ ಸಲಹೆ ನೀಡಿದ್ದ ಸಿದ್ದರಾಮಯ್ಯ ಉನ್ನತ ಶಿಕ್ಷಣ ಇಲಾಖೆಯಲ್ಲಿ ಬೋಧಕೇತರ ಮಾತ್ರವಲ್ಲದೇ ಬೋಧಕ ಹುದ್ದೆಗಳು ಸಾಕಷ್ಟು ಸಂಖ್ಯೆಯಲ್ಲಿ ಖಾಲಿ ಇದ್ದು, ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರು ಸೇವಾ ಭದ್ರತೆಯ ಕನಸು ಕಂಡಿದ್ದರು. ಶೈಕ್ಷಣಿಕ ಅರ್ಹತೆ ವಿಚಾರದಲ್ಲಿ ಕೋರ್ಟ್ ಆದೇಶದಿಂದಾಗಿ ಕಳೆದ ಶೈಕ್ಷಣಿಕ ಸಾಲಿನಿಂದ ಅನೇಕ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡಿದ್ದಾರೆ.

ಮಾನವೀಯತೆ ದೃಷ್ಟಿಯಿಂದ ಸರಕಾರ 5 ವರ್ಷ ಮೇಲ್ಪಟ್ಟ ಸೇವಾನುಭವ ಹೊಂದಿದ ಹಾಗೂ ಶೈಕ್ಷಣಿಕ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಹಿತ ಕಾಯಲು ಶೈಕ್ಷಣಿಕ ಸಂಯೋಜಕರು ಎನ್ನುವ ಹೊಸ ಜವಾಬ್ದಾರಿ ಸೃಷ್ಟಿಸಿದ್ದು ಸ್ವಾಗತಾರ್ಹ.

ಆದರೆ ಕೆಲಸದ ಕಟ್ಟಳೆಗಳ ಬಗ್ಗೆ ಅಸ್ಪಷ್ಟತೆ ಹಾಗೂ ಇದನ್ನು ಕೇವಲ ಮೂರು ವರ್ಷಗಳಿಗೆ ಮಿತಿಗೊಳಿಸಿರುವ ಕ್ರಮ ಸಮಂಜಸವಲ್ಲ. ಮೊದಲಿನಿಂದಲೂ ನಮ್ಮ ಬೇಡಿಕೆ ಇದ್ದದ್ದು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂಬುದು. ಶೈಕ್ಷಣಿಕ ಸಂಯೋಜಕರ ಸೃಷ್ಟಿ ಕೇವಲ ಮೂಗಿಗೆ ತುಪ್ಪ ಸವರುವ ಸರಕಾರದ ತಂತ್ರವಷ್ಟೇ. ಶೈಕ್ಷಣಿಕ ಅರ್ಹತೆ ಹೊಂದಿದ ಹಾಗೂ ಹೊಂದಿಲ್ಲದ ಮತ್ತು ಸೇವಾನುಭವ ಹೊಂದಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಗ್ಯಾರಂಟಿಯನ್ನು ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.

ಈ ನಿಟ್ಟಿನಲ್ಲಿ ಸರಕಾರ ನುಡಿದಂತೆ ನಡೆಯಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲ ಜಿಲ್ಲೆಗಳ ಅತಿಥಿ ಉಪನ್ಯಾಸಕರು ಕ್ವಾಲಿಫೈಡ್, ನಾನ್ ಕ್ವಾಲಿಫೈಡ್ ಎಂಬ ಬೇಧವಿಲ್ಲದೇ ಸರಕಾರದ ವಿರುದ್ಧ ಹೋರಾಟ ಅನಿವಾರ್ಯ. ಸರಕಾರ ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ಸೇವಾಭದ್ರತೆ ಘೋಷಿಸಬೇಕು ಎಂದು ಒತ್ತಾಯಿಸುತ್ತೇವೆ.

ಈ ವಿಚಾರದಲ್ಲಿ ಸರಕಾರದ ಉದಾಸೀನತೆ ತೋರಿದರೆ ಬೃಹತ್ ಮಟ್ಟದ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ. ಹಲವು ಸರಕಾರಗಳು ರಾಜ್ಯದಲ್ಲಿ ಆಡಳಿತ ನಡೆಸಿವೆ. ಎಲ್ಲ ಪಕ್ಷಗಳು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಬಗ್ಗೆ ಅನುಕಂಪದ ಮಾತುಗಳನ್ನು ಹೇಳುತ್ತವೆ.

ಅಧಿಕಾರಕ್ಕೆ ಬಂದಾಗ ಕಾನೂನು ತೊಡಕು, ನಿಯಮಗಳ ಅಡ್ಡಿ ಬಂದು ಬಿಡುತ್ತವೆ. ಆದರೆ ಇದೇ ಮೊದಲ ಸಲ ಕಾಂಗ್ರೆಸ್ ಚುನಾವಣೆಗೂ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಘೋಷಿಸಿದೆ. ಸರಕಾರ ನುಡಿದಂತೆ ನಡೆಯಬೇಕು. ಹನುಮಂತಗೌಡ ಕಲ್ಮನಿ, ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರು.

Editor

Leave a comment