ಕರುನಾಡು ಘರ್ಜುನೆ ಸುದ್ದಿ ಗದಗ :ದಿ 01: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸರ್ಕಾರ ಕಾನೂನು ಬಾಹಿರ ಕ್ರಮಗಳನ್ನು ವಿರೊಧಿಸಿ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಚಿಕ್ಕಬಳ್ಳಾಪೂರ ಜಿಲ್ಲಾ ಡಿ.ಸಿ. ಆಫೀಸ್ ಮುಂದೆ ರೈತರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಖಂಡಿಸಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು ಮೊನ್ನೆ ಚಿಕ್ಕಬಳ್ಳಾಪೂರ ಜಿಲ್ಲೆ, ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ, 13 ಹಳ್ಳಿಗಳ ರೈತರ ಫಲವತ್ತಾದ ಭೂಮಿಯನ್ನು K.I.A.D.B ಭೂಸ್ವಾಧೀನವನ್ನು ವಿರೋಧಿಸಿ ಸುಮಾರು 45 ದಿನಗಳಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಧರಣಿ ನಡೆಸುತ್ತಿರುವ ರೈತರ ಮೇಲೆ ದಿ. 29-04-2026 ರಂದು ಏಕಾಏಕಿ ಖಾಸಗಿ ಗೂಂಡಾಗಳು ಮತ್ತು ಚಿಕ್ಕಬಳ್ಳಾಪೂರ ಪೊಲೀಸ್ ಇಲಾಖೆಯವರು ರೈತರ ಮೇಲೆ ಹಲ್ಲೆ ಮಾಡಿದ್ದು, ಇದರ ವಿರುದ್ಧ ತಾವುಗಳು ಹಲ್ಲೆ ಮಾಡಿರುವ ಗೂಂಡಾಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ರೈತರ ಸಂಘದ ಹೋರಾಟ ಹಮ್ಮಿಕೊಳ್ಳುತ್ತೇವೆ. ಇದು ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ.