Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಎಡಿಎಸ್‌ಎಸ್ ವತಿಯಿಂದ ಅದ್ದೂರಿ ಸಂವಿಧಾನ ಪೂರ್ವಪೀಠಿಕೆ ಕಂಠಪಾಠ ಸ್ಪರ್ಧೆ

ಕರುನಾಡು ಘರ್ಜನೆ ಸುದ್ದಿ ಗದಗ-೦೫ : ಡಾ. ಬಿ. ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತೋತ್ಸವ ಕಾರ್ಯಕ್ರಮವನ್ನು ಗದಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಅದ್ಧೂಯಾಗಿ ಜರುಗಿತು. ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ ಹಾಗೂ ಬುದ್ಧನ…

ಕರುನಾಡು ಘರ್ಜನೆ ಸುದ್ದಿ ಗದಗ-೦೫ : ಡಾ. ಬಿ. ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತೋತ್ಸವ ಕಾರ್ಯಕ್ರಮವನ್ನು ಗದಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಅದ್ಧೂಯಾಗಿ ಜರುಗಿತು. ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ ಹಾಗೂ ಬುದ್ಧನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ರಾಮಚಂದ್ರ ಹಂಸನೂರು ಅವರು ಪ್ರಾಸ್ತಾವಿಕ ಮಾತನಾಡಿ, ಮನುವಾದಿಗಳು ರಾಜಕೀಯದಲ್ಲಿ ನುಸುಳಿ ಸಂವಿಧಾನ ಬದಲು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ನಾವು ಸಂವಿಧಾನ ಉಳಿಸಿಲು ಇಂತಹ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮನುವಾದಿಗಳಿಗೆ ತಕ್ಕ ಉತ್ತರ ಕೊಡೋಣ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡರು ಎಸ್ ಎನ್ ಬಳ್ಳಾರಿ ಮಾತನಾಡಿ, ನಮ್ಮ ಹಿರಿಯರನ್ನು ಈ ವ್ಯವಸ್ಥೆ ಪಶು-ಪಕ್ಷಿಗಳಿಗಿಂತ ಕಡೆಯಾಗಿ ಕಂಡಿದ್ದು, ನೋವುಗಳನ್ನು ಅನುಭವಿಸಿದ್ದಾರೆ. ನಮಗೆ ಯಾವುದೇ ಸ್ವಾತಂತ್ರ‍್ಯ ಇರಲಿಲ್ಲ. ಉತ್ತಮ ಬಟ್ಟೆ, ಆಹಾರ ಇರಲಿಲ್ಲ. ಶಿಕ್ಷಣವಂತೂ ಬಾಳ ದೂರವಿತ್ತು. ಇಂತಹ ಸಂಧರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆ ವಿರುದ್ಧ, ಅಸ್ಪೃಷ್ಯತೆ ವಿರುದ್ಧ ಹೋರಾಟ ನಡೆಸಿದರು. ಸಂವಿಧಾನವನ್ನು ಬರೆದು ಎಲ್ಲರಿಗೂ ಸಮಾನತೆಯಿಂದ ಬದುಕುವ ಹಕ್ಕನ್ನು ಕೊಟ್ಟಿದ್ದಾರೆ” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಡಿಎಸ್‌ಎಸ್ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಮಾತನಾಡಿ, ಪ್ರತಿವರ್ಷ ಈ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದ್ದೇವೆ ಸಂವಿಧಾನದ ಪೂರ್ವ ಪೀಠಿಕೆಯ ಆಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಅರವತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದು ಹೇಳಿದರು.
ಸಂವಿಧಾನ ಪೂರ್ವ ಪೀಠಿಕೆ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿದ್ಯಾರ್ಥಿನಿ ಲಕ್ಷ್ಮೀ ಉಮೇಶ ಲಮಾಣಿ (ಹತ್ತು ಸಾವಿರ ರೂ), ದ್ವಿತೀಯ ಬಹುಮಾನ ಸಮರ್ಥ ರಾಮಚಂದ್ರ ಹಂಸನೂರು (ಸೈಕಲ್), ತೃತೀಯ ಬಹುಮಾನ ವೈಷ್ಣವಿ ಚಲವಾದಿ (ಸೈಕಲ್), ನಾಲ್ಕನೇ ಬಹುಮಾನ ಹರ್ಷಿಕಾ ಹೇಮಂತ ಕಾಳೆ ಅವರು ಆಯ್ಕೆಯಾಗಿದ್ದು ಬಹುಮಾನಗಳನ್ನು ವಿತರಿಸಲಾಯಿತು.
ದಲಿತ ಕಲಾ ಮಂಡಳಿ ವತಿಯಿಂದ ಕ್ರಾಂತಿಗೀತೆ ಹಾಡಲಾಯಿತು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಪೆನ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರಮೇಶ ಕೊಳೂರು, ಬಾಲರಾಜ ಅರಬರ, ಶಿವಸಂಗಮ ಸಮೂಹ ಸಂಸ್ಥೆ ಸಂಸ್ಥಾಪಕರು ಜಿ. ಎಮ್. ಪಲ್ಲೇದ, ಶಂಭು ಕಾಳೆ, ಮಂಜುನಾಥ ಗೊಂದಿ, ನಿತೀಶ್ ಗಟ್ಟೆಣ್ಣವರ, ರಮೇಶ ಚಲವಾದಿ, ಶರಣು ಕಾಳೆ, ಗುರುರಾಜ ಸಂಕಣ್ಣವರ ವಸಂತ ಶಿಂಗಾಡಿ, ವಿಜಯ್ ಹಿರೇಮನಿ, ಸಚಿನ್ ಶಿಂಗಾಡಿ ಇನ್ನೂ ಅನೇಕ ಮುಖಂಡರು, ಯುವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಿತಿಯ ಗೌರವಾಧ್ಯಕ್ಷರಾದ ರಾಘವೇಂದ್ರ ಬಿನ್ನಾಳ ಕಾರ್ಯಕ್ರಮದ ನಿರೂಪಣೆ ಮಾಡಿದರು.

Editor

Leave a comment