Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ಜಾತ್ರೆಯಲ್ಲಿ ಗಾಯಾಳುಗಳ ಪರವಾಗಿ ಮಿಡಿದ ಶ್ರೀಗಳು ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆ; ಕೂಡಲೇ ಪರಿಹಾರ ಘೋಷಿಸಲು ಆಗ್ರಹ.

ಕರುನಾಡು ಘರ್ಜನೆ ಸುದ್ದಿ ಗದಗ 06: ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅವಘಡದಲ್ಲಿ ಗಾಯಗೊಂಡವರ ಪರವಾಗಿ ನಿಂತ ಪೂಜ್ಯ ಶ್ರೀಗಳು ಮತ್ತು ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೆವೆ, ಸಂತ್ರಸ್ತರಿಗೆ ಕೂಡಲೇ ಆರ್ಥಿಕ ಪರಿಹಾರ ಘೋಷಿಸಬೇಕು ಎಂದು ಕ್ರಾಂತಿ ಸೇನೆ ಹಾಗೂ ಸವಿತಾ ಸಮಾಜದ…

ಕರುನಾಡು ಘರ್ಜನೆ ಸುದ್ದಿ ಗದಗ 06: ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅವಘಡದಲ್ಲಿ ಗಾಯಗೊಂಡವರ ಪರವಾಗಿ ನಿಂತ ಪೂಜ್ಯ ಶ್ರೀಗಳು ಮತ್ತು ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೆವೆ, ಸಂತ್ರಸ್ತರಿಗೆ ಕೂಡಲೇ ಆರ್ಥಿಕ ಪರಿಹಾರ ಘೋಷಿಸಬೇಕು ಎಂದು ಕ್ರಾಂತಿ ಸೇನೆ ಹಾಗೂ ಸವಿತಾ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕ್ರಾಂತಿ ಸೇನಾ ಅಧ್ಯಕ್ಷರಾದ ಬಾಬು ಬಾಕಳೆ ಮತ್ತು ಸವಿತಾ ಸಮಾಜದ ಗದಗ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ, “ಜಾತ್ರೆಯಲ್ಲಿ ಗಾಯಗೊಂಡ 18ಕ್ಕೂ ಹೆಚ್ಚು ಭಕ್ತರ ನೋವಿಗೆ ತಕ್ಷಣವೇ ಸ್ಪಂದಿಸಿ, ಅವರ ಆರೋಗ್ಯ ಸುಧಾರಣೆಗೆ ವೈಯಕ್ತಿಕ ಆಸಕ್ತಿ ವಹಿಸಿದ ಪೂಜ್ಯ ಡಾ. ಸಿದ್ದರಾಮ ಶ್ರೀಗಳ ನಡೆ ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ. ಶ್ರೀಗಳ ಮಾರ್ಗದರ್ಶನದಲ್ಲಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ಮಾಡಿದ ಗದಗ ಜಿಲ್ಲಾಧಿಕಾರಿಗಳಿಗೆ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳ ಶ್ರಮಕ್ಕೆ ನಾವು ಈ ಮೂಲಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ,” ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀಮಠದ ಹಾಗೂ ಜಿಲ್ಲಾಡಳಿತದ ಗಮನ ಸೆಳೆದಿರುವ ಮುಖಂಡರು, “ಶ್ರೀಗಳ ಕಾಳಜಿ ಹಾಗೂ ವೈದ್ಯರ ಚಿಕಿತ್ಸೆಯಿಂದ ಗಾಯಾಳುಗಳು ಗುಣಮುಖರಾಗುತ್ತಿರುವುದು ಸಮಾಧಾನದ ಸಂಗತಿ. ಆದರೆ, ಗಾಯಗೊಂಡವರೆಲ್ಲರೂ ಅತ್ಯಂತ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು, ಚಿಕಿತ್ಸೆಯ ನಂತರದ ಅವರ ಜೀವನ ನಿರ್ವಹಣೆಗೆ ಆರ್ಥಿಕ ಆಸರೆಯ ಅಗತ್ಯವಿದೆ. ಆದ್ದರಿಂದ, ಶ್ರೀಮಠದ ವತಿಯಿಂದ 10 ಲಕ್ಷ ರೂಪಾಯಿ ಹಾಗೂ ಜಿಲ್ಲಾಡಳಿತದ ವತಿಯಿಂದ 5 ಲಕ್ಷ ರೂಪಾಯಿ ಸೇರಿ ಒಟ್ಟು 15 ಲಕ್ಷ ರೂಪಾಯಿಗಳ ಪರಿಹಾರವನ್ನು ಈ ಕೂಡಲೇ ಘೋಷಿಸಬೇಕು.
ಶ್ರೀಗಳ ಕಾಳಜಿಯಂತೆ ಸರ್ಕಾರವೂ ಕೂಡ ನೊಂದವರ ಕೈಹಿಡಿಯಬೇಕು,” ಎಂದು ಒತ್ತಾಯಿಸಿದ್ದಾರೆ. “ಕೇವಲ ಭರವಸೆಗಳು ಸಾಲದು, ನೊಂದ ಕುಟುಂಬಗಳ ಕೈಗೆ ಪರಿಹಾರ ಧನ ಶೀಘ್ರವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸದೆ ಮಾನವೀಯತೆಯ ಆಧಾರದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಕ್ರಾಂತಿ ಸೇನಾ ಅಧ್ಯಕ್ಷರಾದ ಬಾಬು ಬಾಕಳೆ ಮತ್ತು ಸವಿತಾ ಸಮಾಜದ ಗದಗ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್. ಹಡಪದ, ಅವಳಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಪರವಾಗಿ ಒತ್ತಾಯಿಸಲಾಗಿದೆ.

ಕೃಷ್ಣಾ ಎಚ್. ಹಡಪದ,
9845650612

Editor

Leave a comment