Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಧಾರವಾಡದಲ್ಲಿ l ರೌಡಿಶಾಹಿ ಅಟ್ಟಹಾಸ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಚಾಕು ಇರಿತ..!

ಕರುನಾಡು ಘರ್ಜುನೆ ಸುದ್ದಿ: ಧಾರವಾಡ: ಕ್ಷುಲ್ಲಕ ವಿಚಾರವೊಂದನ್ನು ಮುಂದಿಟ್ಟುಕೊಂಡು ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಧಾರವಾಡ ನಗರದ ಹಾವೇರಿಪೇಟ ಬಡಾವಣೆ ಸಮೀಪ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೊಹಮ್ಮದ್ ರಫೀಕ್ (35) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು,…
Oplus_16908288

ಕರುನಾಡು ಘರ್ಜುನೆ ಸುದ್ದಿ: ಧಾರವಾಡ: ಕ್ಷುಲ್ಲಕ ವಿಚಾರವೊಂದನ್ನು ಮುಂದಿಟ್ಟುಕೊಂಡು ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಧಾರವಾಡ ನಗರದ ಹಾವೇರಿಪೇಟ ಬಡಾವಣೆ ಸಮೀಪ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೊಹಮ್ಮದ್ ರಫೀಕ್ (35) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಎಂದಿನಂತೆ ಬೆಳಿಗ್ಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಮಾತಿನ ಚಕಮಕಿಯಿಂದ ಆರಂಭವಾದ ವಿವಾದ ಕೆಲವೇ ಕ್ಷಣಗಳಲ್ಲಿ ಹಿಂಸಾತ್ಮಕ ತಿರುವು ಪಡೆದು, ರಫೀಕ್ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿತಕ್ಕೊಳಗಾಗಿದ್ದಾನೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಫೀಕ್ ರಕ್ತದ ಮಡುವಿನಲ್ಲೇ ಮನೆಗೆ ತಲುಪಿ, ಹೊಟ್ಟೆಗೆ ಟವೆಲ್ ಕಟ್ಟಿಕೊಂಡು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ತೆರಳಲು ಬೈಕ್ ಮೇಲೆ ಹೊರಟಿದ್ದಾನೆ. ಆದರೆ ಮಾರ್ಗಮಧ್ಯೆ ರಕ್ತಸ್ರಾವ ಹೆಚ್ಚಾಗಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾನೆ.

ತಕ್ಷಣ ಮಾಹಿತಿ ಪಡೆದ ನವನಗರ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ವೈದ್ಯರು ರಫೀಕ್ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಧಾರವಾಡ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ತಿಳಿದುಬರಬೇಕಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ.

Editor

Leave a comment