Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

“ಕೊಳೆಚೆ ಮಧ್ಯೆ ಕುಡಿಯುವ ನೀರು; ಗಾಳಿಯಲ್ಲಿ ತೇಲುತ್ತಿದೆ ರಸ್ತೆ: ಗದಗ ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ”

ಕರುನಾಡು ಘರ್ಜನೆ ಸುದ್ದಿ ಗದಗ 07: ನಗರದ ಹೃದಯಭಾಗದಲ್ಲಿರುವ ಜವಳಿ ಗಲ್ಲಿಯ ರಾಜಕಾಲುವೆಯು ಇಂದು ನಗರದ ನಾಗರಿಕರ ಪಾಲಿಗೆ ‘ಮೃತ್ಯುಪಾಶ’ವಾಗಿ ಮಾರ್ಪಟ್ಟಿದೆ. ಒಂದೆಡೆ ಚರಂಡಿ ನೀರಿನಲ್ಲೇ ಕುಡಿಯುವ ನೀರಿನ ಪೈಪ್‌ಲೈನ್ ಹರಿಯುತ್ತಿದ್ದರೆ, ಮತ್ತೊಂದೆಡೆ ಮುಖ್ಯ ರಸ್ತೆಯೇ ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ…

ಕರುನಾಡು ಘರ್ಜನೆ ಸುದ್ದಿ ಗದಗ 07: ನಗರದ ಹೃದಯಭಾಗದಲ್ಲಿರುವ ಜವಳಿ ಗಲ್ಲಿಯ ರಾಜಕಾಲುವೆಯು ಇಂದು ನಗರದ ನಾಗರಿಕರ ಪಾಲಿಗೆ ‘ಮೃತ್ಯುಪಾಶ’ವಾಗಿ ಮಾರ್ಪಟ್ಟಿದೆ. ಒಂದೆಡೆ ಚರಂಡಿ ನೀರಿನಲ್ಲೇ ಕುಡಿಯುವ ನೀರಿನ ಪೈಪ್‌ಲೈನ್ ಹರಿಯುತ್ತಿದ್ದರೆ, ಮತ್ತೊಂದೆಡೆ ಮುಖ್ಯ ರಸ್ತೆಯೇ ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿರುವುದು ದುರ್ದೈವದ ಸಂಗತಿ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಾ ಎಚ್. ಹಡಪದ ತೀವ್ರವಾಗಿ ಕಳವಳ ವ್ಯಕ್ತಪಡಿಸಿದ್ದಾರೆ
ಪತ್ರಿಕಾ ಹೇಳಿಕೆಯ ಮೂಲಕ ಮಾತನಾಡಿದ ಅವರು ತುಂಗಭದ್ರಾ ನದಿಯಿಂದ ಸರಬರಾಜಾಗುವ ಮುಖ್ಯ ಕುಡಿಯುವ ನೀರಿನ ಪೈಪ್‌ಲೈನ್ ಅನ್ನು ಜವಳಿ ಗಲ್ಲಿಯ ರಾಜಕಾಲುವೆಯ ಕೊಳಚೆಯಲ್ಲೇ ಅಳವಡಿಸಲಾಗಿದೆ. ಅಚ್ಚರಿಯೆಂದರೆ, ಈ ಪೈಪ್ ಮೇಲೆ ಟನ್‌ಗಟ್ಟಲೆ ಪ್ಲಾಸ್ಟಿಕ್ ಹಾಗೂ ಘನ ತ್ಯಾಜ್ಯ ಹೂತು ಹೋಗಿದೆ. “ಈ ಪೈಪ್‌ನಲ್ಲಿ ಸಣ್ಣ ಬಿರುಕು ಕಂಡುಬಂದರೂ ವಿಷಕಾರಿ ಚರಂಡಿ ನೀರು ನೇರವಾಗಿ ಡೋರಗಲ್ಲಿ, ಹೊಂಬಳನಾಕಾ, ಜನತಾ ಕಾಲೋನಿ, ಮ್ಯಾಗೇರಿ ಓಣಿ ಮತ್ತು ಅಂಬೇಡ್ಕರ್ ನಗರದ ನಿವಾಸಿಗಳ ಹೊಟ್ಟೆ ಸೇರುತ್ತದೆ. ಇದು ಕಾಲರಾ, ಟೈಫಾಯಿಡ್‌ ನಂತಹ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತಿದೆ” ಎಂದು ಕೃಷ್ಣಾ ಎಚ್ ಹಡಪದ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕಾಲುವೆಯ ಪಕ್ಕದಲ್ಲೇ ಕೋಳಿ ಮಾರುಕಟ್ಟೆ ಇದ್ದು, ಅಲ್ಲಿನ ತ್ಯಾಜ್ಯವನ್ನು (ಕೊಳೆತ ಮಾಂಸ ಮತ್ತು ರಕ್ತ) ನೇರವಾಗಿ ಕುಡಿಯುವ ನೀರಿನ ಪೈಪ್‌ಲೈನ್ ಮೇಲೆಯೇ ಎಸೆಯಲಾಗುತ್ತಿದೆ. ಇದರಿಂದ ಇಡೀ ಪ್ರದೇಶ ನರಕ ಸದೃಶವಾಗಿದ್ದು, ದುರ್ವಾಸನೆಯಿಂದಾಗಿ ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕುಡಿಯುವ ನೀರು ವಿಷಪೂರಿತವಾಗುತ್ತಿದೆ ಎಂದರಲ್ಲದೆ ರಾಜಕಾಲುವೆಯ ಪಕ್ಕದಲ್ಲಿರುವ ಮುಖ್ಯ ಸಿಸಿ ರಸ್ತೆಯ ಅಡಿಭಾಗದ ಮಣ್ಣು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. “ರಸ್ತೆ ಅಕ್ಷರಶಃ ಗಾಳಿಯಲ್ಲಿ ನಿಂತಿದೆ.
ಪ್ರತಿದಿನ ಶಾಲಾ ಮಕ್ಕಳು, ಕಾರ್ಮಿಕರು ಇಲ್ಲಿ ಸಂಚರಿಸುತ್ತಿದ್ದಾರೆ. ಸದ್ಯಕ್ಕೆ ರೈಲ್ವೆ ಮೇಲ್ಸೇತುವೆ ಕಾಮಗಾರಿಯಿಂದಾಗಿ ಬಸ್ ಸಂಚಾರವಿಲ್ಲದ ಕಾರಣ ದೊಡ್ಡ ದುರಂತ ತಪ್ಪಿದೆ. ಬಸ್ ಅಥವಾ ಭಾರಿ ವಾಹನಗಳು ಸಂಚರಿಸಿದ್ದರೆ ಈ ರಸ್ತೆ ಕುಸಿದು ಪ್ರಾಣಹಾನಿಯಾಗುವುದು ನಿಶ್ಚಿತವಾಗಿತ್ತು” ಎಂದು ಅವರು ಎಚ್ಚರಿಸಿದ್ದಾರೆ.
*ಗದಗ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ:*
ಸನ್ಮಾನ್ಯ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ್ ಸಾಹೇಬರು ಈ ಕೂಡಲೇ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಕೂಡಲೇ ಪೈಪ್‌ಲೈನ್ ಅನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಮತ್ತು ಕುಸಿಯುತ್ತಿರುವ ರಸ್ತೆಯನ್ನು ಗಟ್ಟಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಎಂದು ಕೃಷ್ಣಾ ಎಚ್ ಹಡಪದ ಅವರು ಆಗ್ರಹಿಸಿದ್ದಾರೆ.

*ಬಾಕ್ಸ್ ಹೇಳಿಕೆ*
°°°°°°°°°°°°°°°
*”ಇದು ಕುಡಿಯುವ ನೀರೋ ಅಥವಾ ವಿಷವೋ?”*
“ರಾಜಕಾಲುವೆಯ ಕೊಳಚೆ ಮತ್ತು ಕೋಳಿ ಮಾಂಸದ ತ್ಯಾಜ್ಯದ ರಾಶಿಯಲ್ಲೇ ಕುಡಿಯುವ ನೀರಿನ ಪೈಪ್ ಲೈನ್ ಹೂತು ಹೋಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಇತ್ತ ಸಿಸಿ ರಸ್ತೆಯೂ ಅಡಿಪಾಯವಿಲ್ಲದೆ ಗಾಳಿಯಲ್ಲಿ ತೇಲುತ್ತಿದ್ದು, ದೊಡ್ಡ ಅವಘಡಕ್ಕೆ ಅಧಿಕಾರಿಗಳು ಕಾಯುತ್ತಿದ್ದಾರೆಯೇ? ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು, ಕೂಡಲೇ ಪೈಪ್‌ಲೈನ್ ಸ್ಥಳಾಂತರಿಸಿ ರಸ್ತೆ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ನಗರಸಭೆಯ ಮುಂದೆ ಉಗ್ರ ಹೋರಾಟ ಅನಿವಾರ್ಯ.”- ಕೃಷ್ಣ ಎಚ್. ಹಡಪದ, ಸಾಮಾಜಿಕ ಕಾರ್ಯಕರ್ತರು, ಗದಗ.

ಕೃಷ್ಣ ಎಚ್. ಹಡಪದ,
9845650612

Editor

Leave a comment