Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಜವಳಗಲ್ಲಿಯ ರಾಜಕಾಲುವೆಯಲ್ಲಿನ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ಆರಂಭ – ಸಾಮಾಜಿಕ ಹೋರಾಟಕ್ಕೆ ಸಂದ ಜಯ; ಕೋಳಿ ಮಾರುಕಟ್ಟೆ ತ್ಯಾಜ್ಯ ವಿಲೇವಾರಿಗೆ ಕೃಷ್ಣಾ ಹಡಪದ ಆಗ್ರಹ.

ಕರುನಾಡು ಘರ್ಜನೆ ಸುದ್ದಿ ಗದಗ 09: ನಗರದ ಹೃದಯಭಾಗದ ಜವಳಗಲ್ಲಿಯಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದ ‘ರಾಜಕಾಲುವೆಯೊಳಗಿನ ಕುಡಿಯುವ ನೀರಿನ ಪೈಪ್‌ಲೈನ್’ ಸ್ಥಳಾಂತರ ಕಾರ್ಯಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಇದು ನಾಗರಿಕರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಾಮಾಜಿಕ…

ಕರುನಾಡು ಘರ್ಜನೆ ಸುದ್ದಿ ಗದಗ 09: ನಗರದ ಹೃದಯಭಾಗದ ಜವಳಗಲ್ಲಿಯಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದ ‘ರಾಜಕಾಲುವೆಯೊಳಗಿನ ಕುಡಿಯುವ ನೀರಿನ ಪೈಪ್‌ಲೈನ್’ ಸ್ಥಳಾಂತರ ಕಾರ್ಯಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಇದು ನಾಗರಿಕರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಾ ಎಚ್. ಹಡಪದ ತಿಳಿಸಿದ್ದಾರೆ.
ಜವಳಗಲ್ಲಿಯ ರಾಜಕಾಲುವೆಯಲ್ಲಿ ಕುಡಿಯುವ ನೀರಿನ ಪೈಪ್ ಹಾದು ಹೋಗಿದ್ದರಿಂದ, ಚರಂಡಿ ನೀರು ಮಲಿನಗೊಂಡು ಕಲುಷಿತ ನೀರು ಪೂರೈಕೆಯಾಗುವ ಭೀತಿ ಎದುರಾಗಿತ್ತು. ಈ ಬಗ್ಗೆ ಪತ್ರಿಕಾ ಪ್ರಕಟಣೆ ಸಹಾಯದಿಂದ ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ಮತ್ತು ಸಚಿವರಿಗೆ ಮನವಿ ಮಾಡಲಾಗಿತ್ತು. ಈ ಗಂಭೀರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಎಚ್.ಕೆ. ಪಾಟೀಲರು ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ಕೃಷ್ಣಗೌಡ್ರು ಪಾಟೀಲರ ಸೂಚನೆಯಂತೆ, ಅವಳಿ ನಗರದ ಅಭಿವೃದ್ಧಿ ಹಾಗೂ ನಾಗರಿಕರ ಹಿತರಕ್ಷಣೆಗಾಗಿ ನಿರಂತರ ಶ್ರಮ ವಹಿಸುತ್ತಿರುವ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಪೈಪ್ ಲೈನ್ ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸ್ಪಂದಿಸಿದ ಸಚಿವರಿಗೆ ಹಾಗೂ ನಗರಸಭೆ ಪಾರಾಯುಕ್ತ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜಕಾಲುವೆ ಪಕ್ಕದಲ್ಲೇ ಇರುವ ಕೋಳಿ ಮಾರುಕಟ್ಟೆಯ ರಕ್ತ ಮತ್ತು ಮಾಂಸದ ತ್ಯಾಜ್ಯವನ್ನು ನೇರವಾಗಿ ಕಾಲುವೆಗೆ ಎಸೆಯಲಾಗುತ್ತಿದೆ. ಇದು ಇಡೀ ಪ್ರದೇಶವನ್ನು ರೋಗಗಳ ತಾಣವನ್ನಾಗಿ ಮಾಡುತ್ತಿದೆ. ಕೂಡಲೇ ಈ ತ್ಯಾಜ್ಯವನ್ನು ಜನವಸತಿ ಇಲ್ಲದ ದೂರದ ಜಾಗದಲ್ಲಿ ಶಾಸ್ತ್ರೋಕ್ತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಆದೇಶಿಸಬೇಕು ಹಾಗೂ ರಾಜಕಾಲುವೆ ಪಕ್ಕದ ರಸ್ತೆಯ ಮಣ್ಣು ಕುಸಿಯುತ್ತಿದ್ದು, ಪ್ರತಿದಿನ ಸಂಚರಿಸುವ ಶಾಲಾ ಮಕ್ಕಳು ಹಾಗೂ ಜನಸಾಮಾನ್ಯರಿಗೆ ಇದು ಮೃತ್ಯುಕೂಪವಾಗಿ ಪರಿಣಮಿಸಿದೆ. ಪೈಪ್ ಸ್ಥಳಾಂತರದ ನಂತರ ಈ ರಸ್ತೆಯನ್ನು ವೈಜ್ಞಾನಿಕವಾಗಿ ದುರಸ್ತಿಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು
ರಾಜಕಾಲುವೆಯಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಮತ್ತು ನಗರಸಭೆ ಈ ಭಾಗದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅವಳಿ ನಗರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಡಳಿತವು ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ತ್ಯಾಜ್ಯ ಮುಕ್ತ ಗದಗವನ್ನಾಗಿ ಮಾಡಲು ಸಹಕರಿಸಬೇಕು ಎಂದು ಗದಗಿನ ಸಾಮಾಜಿಕ ಕಾರ್ಯಕರ್ತ ಕೃಷ್ಣಾ ಎಚ್. ಹಡಪದ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಬಾಕ್ಸ್ ಹೇಳಿಕೆ
°°°°°°°°°°°°°°°
“ಜನರ ನೋವಿಗೆ ಮಿಡಿದ ಪೌರಾಯುಕ್ತರ ಕಾರ್ಯ ಶ್ಲಾಘನೀಯ”

ಗದಗ-ಬೆಟಗೇರಿ ಅವಳಿ ನಗರದ ಅಭಿವೃದ್ಧಿಗೆ ಪಣತೊಟ್ಟಿರುವ ನಗರಸಭೆಯ ಪೌರಾಯುಕ್ತರ ಕಾರ್ಯವೈಖರಿ ನಿಜಕ್ಕೂ ಮೆಚ್ಚುವಂತದ್ದು. ಜವಳಿ ಗಲ್ಲಿಯ ರಾಜಕಾಲುವೆಯಂತಹ ದುರ್ಗಮ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ನಿಂದಾಗುತ್ತಿದ್ದ ಗಂಭೀರ ಸಮಸ್ಯೆಯನ್ನು ಗಮನಕ್ಕೆ ತಂದ ಕೂಡಲೇ, ಸ್ಥಳ ಪರಿಶೀಲಿಸಿ ಕಾಮಗಾರಿ ಆರಂಭಿಸುವಂತೆ ಆದೇಶಿಸಿರುವುದು ಅವರ ಜನಪರ ಕಾಳಜಿಯನ್ನು ತೋರಿಸುತ್ತದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ವೇಗವಾಗಿ ಸ್ಪಂದಿಸಿದ ಪೌರಾಯುಕ್ತರಿಗೆ ಹಾಗೂ ನಗರಸಭೆಯ ಎಲ್ಲಾ ಸಿಬ್ಬಂದಿ ವರ್ಗಕ್ಕೆ ಗದಗ ನಾಗರಿಕರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.
— ಕೃಷ್ಣಾ ಎಚ್. ಹಡಪದ, ಸಾಮಾಜಿಕ ಕಾರ್ಯಕರ್ತರು, ಗದಗ.

ಕೃಷ್ಣಾ ಹಡಪದ
9845650612

Editor

Leave a comment