ಕರುನಾಡು ಘರ್ಜನೆ ಸುದ್ದಿ : ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ಟಿಬಿ ಡ್ಯಾಂ (ತುಂಗಭದ್ರಾ ಜಲಾಶಯ) ಎರಡನೇ ಸೇತುವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸುಮಾರು ಆರಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕೊಪ್ಪಳದ ಹುಲಿಗೆಮ್ಮ ದೇವಿ ಜಾತ್ರೆಗೆ ಆಗಮಿಸಿದ್ದ ಭಕ್ತರು
ಇಂದು ಜಾತ್ರೆ ಮುಗಿಸಿಕೊಂಡು ತಮ್ಮೂರಿಗೆ ಟ್ರ್ಯಾಕ್ಟರ್ನಲ್ಲಿ ಮರಳುತ್ತಿದ್ದರು. ಈ ವೇಳೆ ಟಿಬಿ ಡ್ಯಾಂ ಎರಡನೇ ಸೇತುವೆ ಬಳಿ ವೇಗವಾಗಿ ಬಂದ ಟಿಪ್ಪರ್ ಚಾಲಕ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಲವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ಕೆಳಕ್ಕೆ ಉರುಳಿ ಬಿದ್ದಿದೆ
ಹುಲಿಗೆಮ್ಮ ದೇವಿ ದರ್ಶನ ಯಾತ್ರೆ ದುರಂತದಲ್ಲಿ ಅಂತ್ಯ: 6 ಭಕ್ತರು ಸ್ಥಳದಲ್ಲೇ ಸಾವು..!
ಕರುನಾಡು ಘರ್ಜನೆ ಸುದ್ದಿ : ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ಟಿಬಿ ಡ್ಯಾಂ (ತುಂಗಭದ್ರಾ ಜಲಾಶಯ) ಎರಡನೇ ಸೇತುವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸುಮಾರು ಆರಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…