Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿಸಲು ಸಚಿವ ಎಚ್.ಕೆ. ಪಾಟೀಲ ಸೂಚನೆ.

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು/ಗದಗ, ಮೇ 16: “ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವವನ್ನು ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ…

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು/ಗದಗ, ಮೇ 16: “ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವವನ್ನು ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸಭೆಯು ಶನಿವಾರ ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸಚಿವ ಎಚ್.ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲರು, ಲಕ್ಕುಂಡಿಯ ಪುರಾತತ್ವ ಸಂಪತ್ತಿನ ಸಂರಕ್ಷಣೆ, ದೇವಾಲಯಗಳ ಪುನರುಜ್ಜೀವನ, ಪುರಾತನ ಬಾವಿಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯಗಳನ್ನು ಸಮನ್ವಯದಿಂದ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

“ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಈಗಾಗಲೇ 15 ಬಾವಿ ಹಾಗೂ 15 ದೇವಾಲಯಗಳನ್ನು ಸಾರ್ವಜನಿಕರಿಗೆ ಪರಿಚಯಿಸಲಾಗಿದೆ. ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒಳಗಾಗಿ ತಮ್ಮ ಗುರುತನ್ನು ಕಳೆದುಕೊಂಡಿದ್ದ ಅನೇಕ ಪಾರಂಪರಿಕ ತಾಣಗಳನ್ನು ಸರ್ಕಾರ ಮತ್ತು ಸ್ಥಳೀಯರ ಸಹಕಾರದಿಂದ ಮರು ಅನಾವರಣಗೊಳಿಸುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ” ಎಂದು ಹೇಳಿದರು.

2026 ಅತ್ಯದೊಳಗೆ ಕನಿಷ್ಠ 50 ಬಾವಿ ಹಾಗೂ 50 ದೇವಾಲಯಗಳನ್ನು ಗುರುತಿಸುವ, ಲಕ್ಕುಂಡಿಯ ಪಾರಂಪರಿಕ ತಾಣಗಳ ಸಂಖ್ಯೆಯನ್ನು 100ರ ಗಡಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರಕ್ಕೆ ಸ್ಥಳೀಯರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಸಚಿವ ಎಚ್ ಕೆ ಪಾಟೀಲರು ನುಡಿದರು.

ಲಕ್ಕುಂಡಿಯಲ್ಲಿ 101 ಬಾವಿ, 101 ದೇವಾಲಯಗಳಿವೆ ಎಂದು ಇತಿಹಾಸದಲ್ಲಿ ತಿಳಿಸಿದ್ದು, ಅವುಗಳನ್ನು ಹೆಕ್ಕಿ ತೆಗೆಯುವ ಕಾರ್ಯವು ಪ್ರಾಧಿಕಾರದಿಂದ ಆಗಲಿ, ಈ ದಿಶೆಯಲ್ಲಿ ಅಧಿಕಾರಿಗಳು ಹಾಗೂ ಪ್ರಾದಿಕಾರದ ಸದಸ್ಯರು ಕಾರ್ಯ ಪ್ರವೃತ್ತರಾಗಲಿ ಎಂದು ಸಚಿವರು ತಿಳಿಸಿದರು.

ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, “ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಲಕ್ಕುಂಡಿಯ ಪುರಾತತ್ವ ಸಂಪತ್ತು ಇಂದಿನ ಪೀಳಿಗೆಗೆ ಅಚ್ಚರಿಯ ಸಂಗತಿಯಾಗಿದೆ. ಆ ಕಾಲದ ಶಿಲ್ಪಿಗಳ ಪ್ರತಿಭೆ, ಕಲಾತ್ಮಕತೆ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಇಲ್ಲಿ ದೊರೆಯುತ್ತಿರುವ ಶಿಲ್ಪಗಳು ಹಾಗೂ ಪುರಾವೆಗಳು ಜೀವಂತ ಸಾಕ್ಷಿಗಳಾಗಿವೆ” ಎಂದು ಹೇಳಿದರು.

“ಸಚಿವ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ನಡೆಯುತ್ತಿರುವ ಅನ್ವೇಷಣಾ ಕಾರ್ಯಗಳಿಂದ ಲಕ್ಕುಂಡಿಯ ಐತಿಹಾಸಿಕ ಮಹತ್ವ ಮತ್ತಷ್ಟು ಬೆಳಕಿಗೆ ಬರುತ್ತಿದೆ. ಈಗ ಪತ್ತೆಯಾಗಿರುವ ಪುರಾವೆಗಳು ಕೇವಲ ಆರಂಭ ಮಾತ್ರ. ಇನ್ನಷ್ಟು ಅನ್ವೇಷಣೆಗಳು ನಡೆದರೆ ಲಕ್ಕುಂಡಿಯ ಗತ ವೈಭವ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆ ಇದೆ” ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯರು ಲಕ್ಕುಂಡಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು. ಪಾರಂಪರಿಕ ತಾಣಗಳ ಸಂರಕ್ಷಣೆ, ಪ್ರವಾಸೋದ್ಯಮ ವಿಸ್ತರಣೆ, ಸ್ಥಳೀಯ ಕಲಾ ಪರಂಪರೆಯ ಉತ್ತೇಜನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸದಸ್ಯರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿ.ಜಿ. ಬೆಟಸೂರಮಠ, ಸಿದ್ದಲಿಂಗೇಶ್ವರ ಎಚ್. ಪಾಟೀಲ, ಶ್ರೀಮತಿ ಗೀತಾಂಜಲಿ ರಾವ್, ಅ.ದ. ಕಟ್ಟಿಮನಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಎ., ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೊಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Editor

Leave a comment