Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ I ಬೆಟಗೇರಿ 9ನೇ ವಾರ್ಡಿನಲ್ಲಿ ಜನಸೇವೆಯ ಹೊಸ ಅಧ್ಯಾಯ,ಉರುಳಿದ ಮರಗಳ ತೆರವಿನಲ್ಲಿ ನಗರಸಭಾ ಸದಸ್ಯ ಚಂದ್ರಗೌಡ ಕರಿಸುಮ್ಮನಗೌಡರ ನೇತೃತ್ವದಲ್ಲಿ ಯುವಕರ ಅದ್ಭುತ ಕಾರ್ಯ.

ಕರುನಾಡು ಘರ್ಜುನೆ ಸುದ್ದಿ ಗದಗ-ಬೆಟಗೇರಿ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆಯ ಪರಿಣಾಮವಾಗಿ ಹಲವೆಡೆ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ವಿಶೇಷವಾಗಿ ಬೆಟಗೇರಿ 9ನೇ ವಾರ್ಡಿನಲ್ಲಿ ಅನೇಕ ರಸ್ತೆಗಳು ಮರಗಳಿಂದ ಮುಚ್ಚಿಕೊಂಡು…
Oplus_16908288

ಕರುನಾಡು ಘರ್ಜುನೆ ಸುದ್ದಿ ಗದಗ-ಬೆಟಗೇರಿ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆಯ ಪರಿಣಾಮವಾಗಿ ಹಲವೆಡೆ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು.

ವಿಶೇಷವಾಗಿ ಬೆಟಗೇರಿ 9ನೇ ವಾರ್ಡಿನಲ್ಲಿ ಅನೇಕ ರಸ್ತೆಗಳು ಮರಗಳಿಂದ ಮುಚ್ಚಿಕೊಂಡು ಜನಜೀವನ ಅಸ್ತವ್ಯಸ್ತಗೊಂಡ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇಂತಹ ಸಂಕಷ್ಟದ ಸಮಯದಲ್ಲಿ ವಾರ್ಡಿನ ನಗರಸಭಾ ಸದಸ್ಯರಾದ ಶ್ರೀ ಚಂದ್ರಗೌಡ ಕರಿಸುಮ್ಮನಗೌಡರು ಮಾನವೀಯತೆ ಹಾಗೂ ಜನಪರ ಕಾಳಜಿಯೊಂದಿಗೆ ತಕ್ಷಣ ಕಾರ್ಯಪ್ರವೃತ್ತರಾಗಿ, ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ವೇಗವಾಗಿ ಆರಂಭಿಸಿದ್ದಾರೆ.

ಯಾವುದೇ ವಿಳಂಬವಿಲ್ಲದೆ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರೊಂದಿಗೆ ಸಮನ್ವಯ ಸಾಧಿಸಿ ಜನರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾರ್ಡಿನ ಯುವಕರು ಕೂಡ ಸದಸ್ಯರ ಕರೆಯನ್ನು ಸ್ಪಂದಿಸಿ ಹಗಲು-ರಾತ್ರಿ ಎನ್ನದೇ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವುದು ವಿಶೇಷವಾಗಿದೆ.

ರಸ್ತೆಗಳ ಸ್ವಚ್ಛತೆ, ಮರಗಳ ಕೊಂಬೆಗಳ ತೆರವು, ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಕಾರ್ಯ ಸೇರಿದಂತೆ ಅನೇಕ ಕೆಲಸಗಳಲ್ಲಿ ಯುವಕರ ತಂಡ ಅತ್ಯಂತ ಜವಾಬ್ದಾರಿಯಿಂದ ಭಾಗವಹಿಸಿದೆ.

ಸ್ಥಳೀಯ ನಿವಾಸಿಗಳು ಮಾತನಾಡಿ, “ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು ಸೇವೆ ಮಾಡುವ ಜನಪ್ರತಿನಿಧಿಗಳು ವಿರಳ. ಚಂದ್ರಗೌಡ ಕರಿಸುಮ್ಮನಗೌಡರು ನಿಜವಾದ ಜನಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯುವಕರ ಸಹಕಾರವೂ ಶ್ಲಾಘನೀಯ,” ಎಂದು ಪ್ರಶಂಸಿಸಿದರು.
ಈ ಸೇವಾ ಮನೋಭಾವವು ವಾರ್ಡಿನ ಜನರಲ್ಲಿ ಹೊಸ ಭರವಸೆ ಮೂಡಿಸಿದ್ದು, ಸಾರ್ವಜನಿಕ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೇ ಸಮಸ್ಯೆಯನ್ನೂ ಸಮರ್ಥವಾಗಿ ಎದುರಿಸಬಹುದು ಎಂಬುದಕ್ಕೆ ಬೆಟಗೇರಿ 9ನೇ ವಾರ್ಡ್ ಮಾದರಿಯಾಗಿದೆ.
“ಜನರ ಸಂಕಷ್ಟವೇ ನಮ್ಮ ಹೊಣೆ”
ಸೇವೆಯ ಮೂಲಕ ಜನಮನ ಗೆದ್ದ ಚಂದ್ರಗೌಡ ಕರಿಸುಮ್ಮನಗೌಡರು ಹಾಗೂ ಸಹಕರಿಸಿದ ಎಲ್ಲಾ ಯುವಕರಿಗೆ ಸಾರ್ವಜನಿಕ ವಲಯದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

Editor

Leave a comment