Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಹಿಂದೂ ಸಮಾವೇಶಕ್ಕೆ ಪ್ರತಿರೋಧ; ಶರಣ ಪರಂಪರೆ ನಾಶಗೊಳಿಸುವ ಹುನ್ನಾರ

ಕರುನಾಡು ಘರ್ಜನೆ ಸುದ್ದಿ ಗದಗ : “ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವಶರಣರ ಹಿಂದೂ ಸಮಾವೇಶವನ್ನು ಇದೇ ತಿಂಗಳು 31ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಶರಣ ಪರಂಪರೆ ನಾಶಗೊಳಿಸುವ ಪ್ರಯತ್ನಗಳ ನಡೆಯುತ್ತಿದ್ದು, ಇದಕ್ಕೆ ಸಭೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ : “ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವಶರಣರ ಹಿಂದೂ ಸಮಾವೇಶವನ್ನು ಇದೇ ತಿಂಗಳು 31ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಶರಣ ಪರಂಪರೆ ನಾಶಗೊಳಿಸುವ ಪ್ರಯತ್ನಗಳ ನಡೆಯುತ್ತಿದ್ದು, ಇದಕ್ಕೆ ಸಭೆಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದರು.

ಗದಗ ಪಟ್ಟಣದ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಸಮಾನ ಮನಸ್ಕರು, ಬಸವಾದಿ ಶರಣರು ಮತ್ತು ಸಮಾಜದ ಮುಖಂಡರು ನಗರದಲ್ಲಿ ಹಿಂದೂ ಸಮಾವೇಶ ಮಾಡಿತ್ತಿರುವುದನ್ನು ಖಂಡಿಸಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಮುಖಂಡರಾದ ಅಶೋಕ ಬರಗುಂಡಿ ಅವರು ಮಾತನಾಡಿ, “ಸಮತೆಯ ಬಾಳನ್ನು ಬದುಕಲಿಕ್ಕೆ ಶರಣರು ಇಷ್ಟಲಿಂಗದಲ್ಲಿ ಬೆರೆತು, ಎಲ್ಲರೂ ಒಂದೇ ಎನ್ನುವ ಭಾವದಲ್ಲಿ ಬದುಕುತ್ತಾರೆ. ಇದನ್ನು ಸಹಿಸದ ಮನುವಾದಿಗಳು, ವೈದಿಕ ಮನಸ್ಥಿತಿಯವರು ಇದನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಈ ಮನುವಾದಿಗಳು ನಗರದಲ್ಲಿ ಹಿಂದೂ ಸಮಾವೇಶವನ್ನು ಮಾಡುತ್ತಿರುವುದನ್ನು ನಾವೆಲ್ಲರೂ ಖಂಡಿಸಬೇಕು” ಎಂದು ಹೇಳಿದರು.

“ಗದಗಿನಲ್ಲಿನಲ್ಲಿ ಪ್ರತಿರೋಧ ಒಡ್ಡುವುದಿಲ್ಲವೆಂದು ತಿಳಿದು ಆರ್.ಎಸ್.ಎಸ್, ಮುನುವಾದಿಗಳು ಹಿಂದು ಸಮಾವೇಶ ಮಾಡುತ್ತಿದ್ದು, ಈ ಮೂಲಕ ಬಸವಣ್ಣನವರ ವಿಚಾರಗಳಲ್ಲಿ ಮನುವಾದಿಗಳು ನುಗುತ್ತಿದ್ದಾರೆ. ಗದಗದಲ್ಲಿ ಇದರ ವಿರುದ್ಧ ದೊಡ್ಡಮಟ್ಟದಲ್ಲಿ ಪ್ರತಿರೋಧ ವ್ಯಕ್ತಪಡಿಸಬೇಕು” ಎಂದು ಹೇಳಿದರು.

ದಲಿತ ಹೋರಾಟಗಾರ ಶರೀಫ್ ಬಿಳೆಯಲಿ ಮಾತನಾಡಿ, “ಒಂದು ವರ್ಷದ ಹಿಂದೆ ಆರ್.ಎಸ್.ಎಸ್ ಹಾಗೂ ಹಿಂದೂ ಸಂಘಟನೆಗಳು ಮಹಾಯಜ್ಞ ಕುಂಭಮೇಳ ಮಾಡಿದರು. ಈಗ ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ಮಾಡಲು ಹೊರಟಿದ್ದಾರೆ. ಈ ನಾಡಿನೊಳಗೆ ಕೇವಲ ಬಸವಣ್ಣನವರ ವಚನಗಳನ್ನು ನಾಶಗೊಳಿಸುವುದು ಅಷ್ಟೆ ಅಲ್ಲ, ಈಡೀ ಶೋಷಿತ ವರ್ಗದವರನ್ನು ನಾಶಗೊಳಿಸಲು ಹೊರಟಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಬೇಕು” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ದಲಿತ ಮುಖಂಡರಾದ ಮುತ್ತು ಬಿಳೆಯಲಿ ಮಾತನಾಡಿ, “ಆರ್.ಎಸ್.ಎಸ್.ಪ್ರಚಾರಕರಾದ ಕನ್ಹೇರಿ ಸ್ವಾಮಿ ಹೊದಲ್ಲೇಲ್ಲ ತನ್ನ ಅಶ್ಲೀಲ ಭಾಷೆಯ ಮೂಲಕ ಕೋಮುದ್ವೇಷ ಹರಡುತ್ತಿದ್ದಾನೆ. ಈಗ ಗದಗಲ್ಲಿ ಹಿಂದೂ ಸಮಾವೇಶದ ಹೆಸರಿನಲ್ಲಿ ಗದಗದ ಸೌಹಾರ್ದತೆಯನ್ನು ಹಾಳು ಮಾಡ್ತಿದ್ದಾನೆ.ಈ ಹಿಂದೆ ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಕನ್ಹೇರಿ ಪ್ರವೇಶ ನಿರಾಕರಿಸಿದ್ದರು” ಬಸವಣ್ಣನವರ ವಚನಗಳನ್ನು ಒಪ್ಪಿಕೊಳ್ಳುವರು ಇದನ್ನು ಪ್ರತಿರೋಧಿಸಬೇಕು. ಜಿಲ್ಲೆಗೆ ಬರದಂತೆ ನೋಡಿಕೊಳ್ಳಬೇಕು. ಗದಗಗಿನಲ್ಲಿ ವಚನ ದರ್ಶನ ಕಾರ್ಯಕ್ರಮ ಮೂಲಕವೇ ಆರಂಭ ಮಾಡಿದ್ದಾರೆ. ಅವಾಗ ನಾವು ಪ್ರತಿರೋಧ ಒಡ್ಡಿದ್ದೇವು. ಇಂತಹ ಕೋಮುದ್ವೇಶ ಬಿತ್ತುವವರ ವಿರುದ್ದ ಪ್ರತಿಭಟನೆ ಮಾಡಬೇಕು. ಇಂತಹ ಕೋಮುವಾದಿಗಳಿಗೆ ಜಿಲ್ಲೆಗೆ ಪ್ರವೇಶ ಮಾಡದಂತೆ ನೋಡಿಕೊಳ್ಳೋಣ” ಎಂದು ಕರೆ ನೀಡಿದರು.

ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಮಾತನಾಡಿ, “ನಾವು ಭಾವನಾತ್ಮಕವಾಗಿ, ವೈಚಾರಿಕವಾಗಿ ಬಸವಣ್ಣನವರನ್ನು ಒಪ್ಪಿಕೊಂಡವರು. ಈ ಆಶಯವನ್ನು ಇಟ್ಟುಕೊಂಡು ಸಮಾಜವನ್ನು ನಿರ್ಮಾಣ ಮಾಡುವ ಆಶೆಯುಳ್ಳವರಾಗಿದ್ದೇವೆ. ಆದರೆ ಇಲ್ಲಿರುವ ಮಠಗಳಂತಿರುವ ಮಠಗಳು ಲಿಂಗಾಯತ, ಶರಣತ್ವ, ಅಂತ ಬದುಕಲೆಯಿಲ್ಲ. ಬದುಕಿದ್ದರೇ ಬೇರೆಯೇ ಆಗುತ್ತಿದ್ದವು. ಇಡೀ ಜಿಲ್ಲೆಯಲ್ಲಿ ಬೇರೆಯೆ ರೀತಿಯ ವಾತಾವರಣ ಆಗುತ್ತಿತ್ತು. ಆ ಮಠದ ಜಾತ್ರಾ ಸಮಿತಿಯ ಅಧ್ಯಕ್ಷರು ಈ ಹಿಂದೂ ಸಮಾವೇಶಕ್ಕೆ ಹೋಗ್ತಿದ್ದಾರೆ ಎಂದರೆ ಈ ಮಠದ ಆಯ್ಕೆಗಳು ಏನು ಎಂಬುದರ ಕುರಿತು ಯೋಚಿಸಬೇಕಿದೆ. ಈ ಮಠದ ಮೇಲೆ ತುಂಬ ಭರವಸೆ ಇಟ್ಟುಕೊಂಡಿದ್ದೀವಿ. ಆ ಒಳಸಂಕಟದಿಂದ ಹೇಳುತ್ತಿದ್ದೀವಿ, ಆರೋಪದ ಭಾಷೆಯಲ್ಲ. ಈಗ ಆಗುತ್ತಲಿರುವ ಹಿಂದೂ ಸಮಾವೇಶವನ್ನು ನಾವೆಲ್ಲರೂ ಪ್ರತಿಭಟಿಸಬೇಕಿದೆ” ಎಂದು ಹೇಳಿದರು.

ಎಸ್.ಎನ್ ಬಳ್ಳಾರಿ ಅವರು ಮಾತನಾಡಿ, “ನಮ್ಮ ನಮ್ಮವರೇ ಆ ಹಿಂದೂ ಸಮಾವೇಶದಲ್ಲಿ ಭಾಗವಹಿಸುತ್ತದ್ದಾರೆ. ತಿಳಿಯದೇ ಇರುವವರು ಭಾಗವಹಿಸುದು ಒಂದು ಕಡೆ ಇರಲಿ, ತಿಳಿದವರೇ, ಅರಿತುಕೊಂಡವರೇ ಅವರ ಆಶೆ ಆಮೀಶುಗಳಿಗೆ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಇಂತವರನ್ನು ನಾವು ಏನೆಂದು ಹೇಳಬೇಕು. ಹಾಗಾಗಿ ಮನೆ ಮನೆಗೆ, ವಾರ್ಡ್ ವಾರ್ಡ್ ಗಳಿಗೆ ಹೋಗಿ ಜಾಗೃತಿ ಮೂಡಿಸುವ ಮೂಲಕ ಈ ಹಿಂದೂ ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಬೇಕು” ಎಂದರು.

*ಪೂರ್ವಭಾವಿ ಸಭೆಯ ತಿರ್ಮಾನ*
ಸಭೆಯಲ್ಲಿ ಚರ್ಚಿಸಿ “ಮುಂದಿನ ದಿನಗಳಲ್ಲಿ ನಿಜ ಶರಣರ ಸಮಾವೇಶ ಹಮ್ಮಿಕೊಳ್ಳುವುದರ ಮೂಲಕ ವಚನ ಚಳುವಳಿಯನ್ನು ಜಿಲ್ಲೆಯ ಪ್ರತಿ ಮನೆ ಮನೆಗೂ ತಲುಪಿಸಬೇಕು. ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಸ್ವಾಮಿಜಿಯನ್ನು ಗದಗ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ, ಗದಗ ಜಿಲ್ಲೆಯ ಜನತೆಗೆ ಜಾಗೃತಿ ಮೂಡಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತಿರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಬಸವರಾಜ.ಎಂ. ಕಡೇಮನಿ, ಎಚ್.ಎಸ್.ಸೊಂಪೂರ, ಕೊಟ್ರಬಸಪ್ಪ ಚಟ್ಟಿ, ವಿ‌.ಕ.ಕರೇಗೌಡ್ರ, ದೀಲಿಪಕುಮಾರ ಹಲವಾಗಲಿ, ಪ್ರಕಾಶ ಅಸುಂಡಿ, ಮಂಜುನಾಥ ಹಗೇದಾಳ, ಎಸ್.ಐ.ಪವಾಡಗೌಡ್ರ, ಆನಂದ ಶಿಂಗಾಡಿ, ನಾಗಭೂಷನ್ ಬಡಗನ್ನವರ, ಸುವರ್ಣ ಗಾಳಪ್ಪನವರ, ಸುಜಾತಾ ವಾರದ, ಮಂಗಳಾ ನಾಲವಾಡ,ಬಾಲರಾಜ ಅರಬರ, ಶಿವಾನಂದ ತಮ್ಮಣ್ಣವರ, ಪರಶು ಕಾಳೆ, ಅನಿಲ್ ಕಾಳೆ,ಬಸೂ ಬಿಳೆಯಲಿ, ಮಂಜುನಾಥ ಹಗೆದಾಳ,ಸೇರಿದಂತೆ ಜಿಲ್ಲೆಯ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ, ಬಸವದಳ, ಮೇ ಸಾಹಿತ್ಯ ಮೇಳ, ದಲಿತ ಕಲಾ ಮಂಡಳಿ, ದಲಿತ ಸಂಘಟನೆಗಳ ಒಕ್ಕೂಟ, ನಗರದ ಎಲ್ಲ ಪ್ರಗತಿಪರ ಮತ್ತು ಬಸವಾದಿ ಶರಣರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Editor

Leave a comment