Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ ೨೧: ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಮತ್ತು ಕೃಷಿ ವಲಯದ ಅಭಿವೃದ್ಧಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರಾದ…

ಕರುನಾಡು ಘರ್ಜನೆ ಸುದ್ದಿ ಗದಗ ೨೧: ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಮತ್ತು ಕೃಷಿ ವಲಯದ ಅಭಿವೃದ್ಧಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಹಾಗೂ ತಾಲೂಕ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರಾದ ಶಂಕರಗೌಡ ಜಯನಗೌಡರ ಇವರ ಸಮ್ಮುಖದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟು, ಸರ್ಕಾರವು ಕೂಡಲೇ ಸ್ಪಂದಿಸುವAತೆ ಒತ್ತಾಯಿಸಿದರು. ಎಫ್‌ಐಡಿ ಮೂಲಕ ರಸಗೊಬ್ಬರ ವಿತರಣೆ ಮಾಡುವ ಪದ್ಧತಿಯನ್ನು ರದ್ದುಪಡಿಸಬೇಕು. ನೇರವಾಗಿ ರೈತರಿಗೆ ಸಂಪೂರ್ಣ ರಸಗೊಬ್ಬರವನ್ನು ಪೂರೈಕೆ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಎಮ್.ಎಸ್.ಪಿ. ಬೆಂಬಲ ಬೆಲೆ ನೀಡುವ ಕೇಂದ್ರಗಳನ್ನು ವರ್ಷದ ೧೨ ತಿಂಗಳು ತೆರೆಯಬೇಕು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತರ ಅನುಕೂಲಕ್ಕಾಗಿ ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸಬೇಕು. ದೇಸಿ ಹಸುಗಳನ್ನು ಸಾಕುವ ರೈತರಿಗೆ ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ಧನ ನೀಡಬೇಕು. ರೈತರ ಬೆಳೆಗಳನ್ನು ನಾಶಪಡಿಸುತ್ತಿರುವ ಮಂಗಗಳ ಮತ್ತು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆಯು ಕೂಡಲೇ ಅವುಗಳನ್ನು ಸೆರೆಹಿಡಿದು ಸುರಕ್ಷಿತ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಬೇಕು. ಫಸಲು ಭೀಮಾ ಯೋಜನೆಯಡಿಯಲ್ಲಿ ಬೆಳೆವಿಮೆಯ ಯೋಜನೆಯನ್ನು ಸ್ಯಾಟಲೈಟ್ ಮತ್ತು ಬಯೋಮೆಟ್ರಿಕ್ ಸರ್ವೇ ಮೂಲಕ ವೈಜ್ಞಾನಿಕವಾಗಿ ಬೆಳೆಹಾನಿಯನ್ನು ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಬೆಳೆವಿಮೆ ಮಂಜೂರು ಮಾಡಬೇಕು. ಮಾರುಕಟ್ಟೆಯಲ್ಲಿ ಲಭ್ಯವಿರುವ ಕಳಪೆ ಬೀಜಗಳ ಮಾರಾಟವನ್ನು ತಡೆಗಟ್ಟಬೇಕು ಮತ್ತು ಸರ್ಕಾರದಿಂದ ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ವಿತರಿಸುವುದನ್ನು ಖಾತ್ರಿಪಡಿಸಬೇಕು. ಪ್ರತಿ ಗ್ರಾಮಗಳ ನಮ್ಮ ಹೊಲ, ನಮ್ಮ ದಾರಿ ಯೋಜನೆಯಡಿ ಪ್ರತಿ ರೈತನ ಜಮೀನಿಗೆ ಸೂಕ್ತ ಸಂಪರ್ಕ ದಾರಿಗಳನ್ನು ನಿರ್ಮಿಸಿಕೊಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗದಗ ಜಿಲ್ಲೆಯ ಕೃಷಿ ಮಾರುಕಟ್ಟೆಗಳಲ್ಲಿ ಕಾಯಿಪಲ್ಲೆ ಮತ್ತು ಹಸೆ ಮಾಲಿನ ವ್ಯಾಪಾರವು ರಾತ್ರಿವೇಳೆ ಮಾರಾಟವಾಗುವುದರಿಂದ ರೈತರಿಗೆ ತೊಂದರೆದಾಯಕವಾಗಿದ್ದು ಅದಲ್ಲದೇ ರೈತರ ಕಾಯಿಪಲ್ಲೆ ಮಾಲುಗಳು ಹಂದಿ ಮತ್ತು ಧನಕರುಗಳಿಂದ ಲುಕ್ಸಾನ ಆಗುತ್ತಿದ್ದು ಆದ್ದರಿಂದ ರಾತ್ರಿವೇಳೆಯಲ್ಲಿ ರೈತರಿಗೆ ಅಘಾತಕಾರಿ ಆಗಿರುತ್ತದೆ. ಆದ ಕಾರಣ ಬೆಳಗಿನ ಜಾವ ೬-೦೦ ಘಂಟೆಯಿAದ ೯-೦೦ ಘಂಟೆಯವರೆಗೆ ರೈತರ ಕಾಯಿಪಲ್ಲೆ, ಹಸೆ ಮಾಲುಗಳನ್ನು ಬೆಳಗಿನ ಜಾವ ೬-೦೦ ಗಂಟೆಯಿAದ ಹರಾಜು ಮಾಡುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಆದಕಾರಣ ತಾರೀಖು: ೨೫-೦೫-೨೦೨೬ ರಂದು ಗದಗ ಕೃಷಿ ಮಾರುಕಟ್ಟೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದು ಈ ಸಂದರ್ಭದಲ್ಲಿ ಶಂಕರಗೌಡ ಎಂ. ಜಯನಗೌಡರ, ಮಹಾದೇವ ವೇರ್ಣೇಕರ, ಆದೇಶ ಹುಲಗೂರು, ಗೂಳಪ್ಪ ಗುಡದೂರ, ಗಿರೀಶ ಹೊಸಮನಿ, ಅಂದಪ್ಪ ಅಂಗಡಿ, ರಾಮಣ್ಣ ಕಮ್ಮಾರ, ಶಂಕರಗೌಡ ಪಾಟೀಲ, ಶಿವಮೂರ್ತಿ ದೊಡ್ಡವಾಡ, ರಾಮನಗೌಡ ಪಾಟೀಲ, ಪ್ರವೀಣ ಕರ್ಣೆ, ಪ್ರಕಾಶ ಹಡಗಲಿ, ರವಿ ವಗ್ಗಣ್ಣವರ, ಬಸವರಾಜ ಮರಾಠಿ, ಸಂತೋಷ ಮಠದ, ಮಲ್ಲಪ್ಪ ಮಠದ ಸೇರಿದಂತೆ ಸಂಘಟನೆಯ ಅನೇಕ ಪದಾಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

Editor

Leave a comment