Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

Koppal| ಜನಪ್ರತಿನಿಧಿಗಳು,ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಪಡೆಯುವ ಕಡ್ಡಾಯ ಕಠಿಣ ನಿರ್ಬಂಧ ವಿಧಿಸುವ ಕಾನೂನು ಜಾರಿಗೆ ಒತ್ತಾಯಿಸಿ ಮನವಿ

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ.ಮೇ.22: ಕರ್ನಾಟಕದಲ್ಲಿ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳ ಸಂರಕ್ಷಣೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲಾ ಶಿಕ್ಷಣ ಕಡ್ಡಾಯಗೊಳಿಸುವಿಕೆ ಮತ್ತು ಚುನಾವಣಾ ಅರ್ಹತೆಗೆ ಕಠಿಣ ನಿರ್ಬಂಧ ವಿಧಿಸುವ ಕಾನೂನು ಜಾರಿಗೆ ತರುವಂತೆ ಶಾಲಾ ಕಾಲೇಜುಗಳ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ.ಮೇ.22: ಕರ್ನಾಟಕದಲ್ಲಿ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳ ಸಂರಕ್ಷಣೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲಾ ಶಿಕ್ಷಣ ಕಡ್ಡಾಯಗೊಳಿಸುವಿಕೆ ಮತ್ತು ಚುನಾವಣಾ ಅರ್ಹತೆಗೆ ಕಠಿಣ ನಿರ್ಬಂಧ ವಿಧಿಸುವ ಕಾನೂನು ಜಾರಿಗೆ ತರುವಂತೆ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ”ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ”ಯ ಪರವಾಗಿ ನಾಡಿನ ಬಡ, ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸುವ ಹಿತದೃಷ್ಟಿಯಿಂದ ಈ ಕೆಳಗಿನ ಪ್ರಮುಖ ಅಂಶಗಳನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ.
1. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಪ್ರಸ್ತುತ ಸ್ಥಿತಿಗತಿ: ಕಳೆದ ಕೆಲವು ವರ್ಷಗಳಲ್ಲಿ ದಾಖಲಾತಿ ಕೊರತೆ (ಶೂನ್ಯ ದಾಖಲಾತಿ) ಮತ್ತು ಸಮರ್ಪಕ ಸೌಲಭ್ಯಗಳಿಲ್ಲದ ಕಾರಣ ರಾಜ್ಯಾದಾದ್ಯಂತ ನೂರಾರು ಸರ್ಕಾರಿ ಶಾಲೆಗಳು ಬಂದ್ ಆಗಿವೆ ಅಥವಾ ಪಕ್ಕದ ಶಾಲೆಗಳೊಂದಿಗೆ ವಿಲೀನಗೊಂಡಿವೆ. ಇತ್ತೀಚಿನ ಸರ್ಕಾರಿ ವರದಿಗಳು ಹಾಗೂ ಶಿಕ್ಷಣ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ನೂರಾರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮುಚ್ಚುವ ಭೀತಿಯಲ್ಲಿವೆ. ಗ್ರಾಮೀಣ ಭಾಗದ ಬಡ ಜನರಿಗೆ ಶಿಕ್ಷಣ ನೀಡುವ ಈ ದೇಗುಲಗಳು ಮುಚ್ಚುತ್ತಿರುವುದು ಅತ್ಯಂತ ಆತಂಕಕಾರಿ ವಿದ್ಯಮಾನವಾಗಿದೆ.
2. ಸರ್ಕಾರಿ ಶಾಲೆಗಳ ಉಳಿವಿಗಾಗಿ ಕ್ರಾಂತಿಕಾರಿ ಕಾನೂನಿನ ಅಗತ್ಯತೆ: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಬೇಕಾದರೆ ವ್ಯವಸ್ಥೆಯ ಭಾಗವಾಗಿರುವವರೇ ಅದರಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ, ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರುವಂತೆ ಸರ್ಕಾರವು ಈ ಕೆಳಗಿನ ಕಡ್ಡಾಯ ಕಾನೂನನ್ನು ರೂಪಿಸಬೇಕಾಗಿ ವಿನಂತಿ:
ಕಡ್ಡಾಯ ಶಿಕ್ಷಣ ನಿಯಮ: ಸರ್ಕಾರಿ ಶಾಲಾ ಶಿಕ್ಷಕರು, ಸರ್ಕಾರದ ಎಲ್ಲಾ ಇಲಾಖೆಗಳ (ಎ, ಬಿ, ಸಿ ಮತ್ತು ಡಿ ದರ್ಜೆಯ) ಅಧಿಕಾರಿಗಳು, ನೌಕರರು ಹಾಗೂ ಎಲ್ಲಾ ಹಂತದ (ಗ್ರಾಮ ಪಂಚಾಯತಿಯಿಂದ ಹಿಡಿದು ಸಂಸತ್ತಿನವರೆಗೆ) ಚುನಾಯಿತ ಪ್ರತಿನಿಧಿಗಳು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ‘ಸರ್ಕಾರಿ ಶಾಲೆಗಳಲ್ಲೇ” ಶಿಕ್ಷಣ ಕೊಡಿಸಬೇಕು.
“ಚುನಾವಣಾ ಅರ್ಹತೆಗೆ ಕಠಿಣ ನಿರ್ಬಂಧ:” ಯಾವುದೇ ಹಂತದ ಸಾರ್ವಜನಿಕ ಚುನಾವಣೆಗೆ (ಸ್ಥಳೀಯ ಸಂಸ್ಥೆಗಳು, ವಿಧಾನಸಭೆ, ಲೋಕಸಭೆ) ಸ್ಪರ್ಧಿಸುವ ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರಬೇಕು ಅಥವಾ ಓದಿರಬೇಕು ಎಂಬ ಕಡ್ಡಾಯ ನಿಯಮವನ್ನು ಕಾನೂನಿನಲ್ಲಿ ಸೇರಿಸಬೇಕು. ಇಲ್ಲದಿದ್ದರೆ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಅನರ್ಹಗೊಳಿಸಬೇಕು. ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಮತ್ತು ರಾಜ್ಯ ಸಭೆ ಮುಂತಾದ ನಾಮನಿರ್ದೇಶನ ಮಾಡುವಾಗ ಸಹ ಆಯಾ ವ್ಯಕ್ತಿಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಅಥವಾ ಓದಿದ್ದಾರೆ ಎಂಬ ನಿಯಮ ಕಡ್ಡಾಯಗೊಳಿಸಬೇಕು.
3. ಈ ಕಾನೂನಿನಿಂದಾಗುವ ಧನಾತ್ಮಕ ಬದಲಾವಣೆಗಳು: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾದಾಗ, ಶಾಲೆಗಳ ಮೂಲಸೌಕರ್ಯ (ಕಟ್ಟಡ,ಗಣಕಯಂತ್ರ. ಪ್ರಯೋಗಾಲಯ. ಗ್ರಂಥಾಲಯ.ಕುಡಿಯುವ ನೀರು,ಶೌಚಾಲಯ, ) ತಾನಾಗಿಯೇ ಅತ್ಯುನ್ನತ ಮಟ್ಟಕ್ಕೆ ಸುಧಾರಿಸುತ್ತದೆ.
* ಬೋಧನಾ ಗುಣಮಟ್ಟ ಹೆಚ್ಚಲಿದ್ದು, ಸಾರ್ವಜನಿಕರಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಮರುಕಳಿಸಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ಹೆಚ್ಚುತ್ತದೆ.
* ಬಡ ಮತ್ತು ಶ್ರೀಮಂತ ಮಕ್ಕಳ ನಡುವಿನ ಶೈಕ್ಷಣಿಕ ತಾರತಮ್ಯ ನಿವಾರಣೆಯಾಗಿ ಸಮಾನ ಶಿಕ್ಷಣದ ಹಕ್ಕು ಸಾಕಾರಗೊಳ್ಳುತ್ತದೆ.
**ಮನವಿ:** ಆದ್ದರಿಂದ, ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯು ತಮಗೆ ಒತ್ತಾಯಪೂರ್ವಕವಾಗಿ ವಿನಂತಿಸುವುದೇನೆಂದರೆ, ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮುಚ್ಚುತ್ತಿರುವ ಶಾಲೆಗಳನ್ನು ಪುನಶ್ಚೇತನಗೊಳಿಸಬೇಕು. ಹಾಗೂ ಪ್ರಸಕ್ತ ಸಾಲಿನಲ್ಲೇ ವಿಶೇಷ ಸುಗ್ರೀವಾಜ್ಞೆ ಅಥವಾ ಕಾಯ್ದೆಯ ಮೂಲಕ ಮೇಲ್ಕಂಡ ನಿರ್ಬಂಧಗಳನ್ನು ಒಳಗೊಂಡ ಕ್ರಾಂತಿಕಾರಿ ಕಾನೂನನ್ನು ಜಾರಿಗೆ ತರಬೇಕು ಎಂದು ನಾಡಿನ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇವೆ ಎಂದು ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ.ಗಫಾರ್.ಗೌರವ ಅಧ್ಯಕ್ಷ ಬಸವರಾಜ್ ಶೀಲವಂತರ್.ಪಾಸ್ಟರ್ಸ್ ಅಸೋಸಿಯೇಷನ್ ಚನ್ನಬಸಪ್ಪ ಅಪ್ಪಣವರ್.ಮಾನವ ಬಂದತ್ವ ವೇದಿಕೆಯ ಜಿಲ್ಲಾ ಮುಖಂಡ ಟಿ. ರತ್ನಾಕರ್.ರಾಜನಹಳ್ಳಿ ಗುರು ಪೀಠದ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್.ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಮಖಬೂಲ್ ರಾಯಚೂರು. ಶಿವಪ್ಪ ಹಡಪದ್. ಪರಸಪ್ಪ ಸಿ.ಮುಂತಾದವರು ತಿಳಿಸಿದ್ದಾರೆ.ಬಳಿಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಸೋಮಶೇಖರಗೌಡ ಪಾಟೀಲ್ ಅವರಿಗೂ ಮನವಿ ಸಲ್ಲಿಸಲಾಯಿತು.

Editor

Leave a comment