Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ:ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್.

ಕರುನಾಡು ಘರ್ಜುನೆ ಸುದ್ದಿ ಗದಗ  ಮೇ 26: ಜಿಲ್ಲೆಯಲ್ಲಿ ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ರಾಷ್ಟಿçÃಯ ಡೆಂಗೀ ದಿನ ಮತ್ತು ಜಿಲ್ಲಾ…

ಕರುನಾಡು ಘರ್ಜುನೆ ಸುದ್ದಿ ಗದಗ  ಮೇ 26: ಜಿಲ್ಲೆಯಲ್ಲಿ ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ರಾಷ್ಟಿçÃಯ ಡೆಂಗೀ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚುಕ್ಯುನ್ ಗುನ್ಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ವಿವಿಧ ಇಲಾಖೆಯ ಸಮನ್ವಯತೆಯೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಿರುವ ಕುರಿತು ಪರಿಶೀಲನೆ ನಡೆಸಬೇಕು. ಸೊಳ್ಳೆ ನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿಯಾಗುತ್ತಿರುವ ಸ್ಥಳದಲ್ಲಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಸ್ ಡಿಪೋಗಳಲ್ಲಿ ಖಾಲಿ ಟಾಯರ್ ಗಳಲ್ಲಿ ಹಾಗೂ ಘನ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಖಾಲಿ ಟಾಯರ್ ಮೇಲೆ ಟಾರ್ಪಾಲನ್ನು ಹಾಕಿ ತಕ್ಷಣ ವಿಲೇವಾರಿಗೆ ಕ್ರಮ ವಹಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳಿಗೆ ಸಂಬAಧಿಸಿದAತೆ 2026 ಜನೆವರಿಯಿಂದ ಏಪ್ರಿಲ್ ವರೆಗೆ 120029 ರಕ್ತ ಲೇಪನ ಪರೀಕ್ಷೆಗಳನ್ನು ಕೈಗೊಳ್ಳಲಾಗಿದ್ದು 2 ಮಲೇರಿಯಾ ಪ್ರಕರಣಗಳು ಖಚಿತಪಟ್ಟಿವೆ. ಡೆಂಗೀ ಪ್ರಕರಣಗಳಿಗೆ ಸಂಬAಧಿಸಿದAತೆ 2026 ಜನೆವರಿಯಿಂದ ಏಪ್ರಿಲ್‌ವರೆಗೆ 607 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು 17 ಡೆಂಗೀ ಪ್ರಕರಣಗಳು ಖಚಿತಪಟ್ಟಿವೆ. ಚಿಕೂನ್ ಗುನ್ಯಾ ಪ್ರಕರಣಗಳಿಗೆ ಸಂಬAಧಿಸಿದAತೆ 2026 ಜನೆವರೆಯಿಂದ ಏಪ್ರಿಲ್‌ವರೆಗೆ 109 ರಕ್ತದ ಮಾದರಿ ಪರೀಕ್ಷಿಸಲಾಗಿದ್ದು 7 ಚಿಕೂನ್ ಗುನ್ಯಾ ಪ್ರಕರಣಗಳು ಖಚಿಪಟ್ಟಿವೆ ಎಂದರು.

ಶಾಲಾ ಮಕ್ಕಳಿಗೆ ಡೆಂಗೀ ಹಾಗೂ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರಿಗೆ ಕೀಟಜನ್ಯ ರೋಗಗಳು ಬಾರದಂತೆ ಮುಂಜಾಗ್ರತೆ ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳುವಳಿಕೆ ನೀಡಲಾಗಿದೆ. ಮನೆಗಳ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಹಾಗೂ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಗಿದೆ. ಕಸ ವಿಲೇವಾರಿ ವಾಹನದ ಮೂಲಕವೂ ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ.ವೆಂಕಟೇಶ ರಾಠೋಡ ಸಭೆಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ಡೆಂಗಿ ಜ್ವರ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಹಾಯಕ ಕೀಟಶಾಸ್ತçಜ್ಞರಾದ ಅನ್ನಪೂರ್ಣ ಶೆಟ್ಟರ್ ಅವರು ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳ ನಿಯಂತ್ರಣ ಸಂಬAಧಿಸಿದAತೆ ಸೊಳ್ಳೆಯ ಜೀವನಚಕ್ರದ ಬಗ್ಗೆ ಹಾಗೂ ಲಾರ್ವಾಹಾರಿ ಮೀನುಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಸರ್ವರನ್ನು ಸ್ವಾಗತಿಸಿ ಸಭೆಯ ಉದ್ದೇಶವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಿ.ಸಿ.ಕರಿಗೌಡ್ರ, ಡಾ. ರಾಜೇಂದ್ರ ಬಸರಿಗಿಡದ, ಡಾ.ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಮನ್ವಯ ಸಮಿತಿ ಸದಸ್ಯರು ಹಾಜರಿದ್ದರು.

ಬಾಕ್ಸ್ ಐಟಂ:

ಡೆಂಗೀ ಜ್ವರವು ಸೋಂಕು ಹೊಂದಿದ ಈಡಿಸ್ ಈಜಿಪ್ಟೆöÊ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಯು ಕಚ್ಚಿದ 4-8 ದಿನಗಳ ಒಳಗೆ ಈ ರೋಗದ ಪ್ರಾಥಮಿಕ ರೋಗ ಲಕ್ಷಣಗಳು ಕಂಡುಬರುತ್ತದೆ. ಡೆಂಗಿ ಜ್ವರಕ್ಕೆ ನಿರ್ದಿಷ್ಟ ಔಷಧಿ ಇರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಿ ನಿರ್ವಹಣೆ ಮಾಡಲಾಗುವುದು. ಹೀಗಾಗಿ ಜ್ವರ ಬಂದ ನಂತರ 4 ನೇ ದಿನದಿಂದ 7 ನೇ ದಿನದವರೆಗೆ ಅತ್ಯಂತ ಎಚ್ಚರವಹಿಸಿ , ವೈದ್ಯರ ಸಲಹೆ ಪಡೆಯಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ನೀಡಲಾಗುವುದು.

ಡೆಂಗಿಜ್ವರ ಬರದಂತೆ ತಡೆಯಲು ಮುಂಜಾಗ್ರತಾ ಕ್ರಮಗಳು : ಡೆಂಗಿ ಜ್ವರವು ಈಡಿಸ್ ಈಜಪ್ಟೆöÊ ಸೊಳ್ಳೆಗಳಿಂದ ಹರಡುತ್ತದೆ. ಈ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಗಳಾಗಿದ್ದು ನೋಡಲು ಕಪ್ಪು ಬಿಳುಪಿನ ಪಟ್ಟಿ ಹೊಂದಿರುತ್ತದೆ. ಸ್ವಚ್ಛ ನೀರಿನಲ್ಲಿ ತನ್ನ ಸಂತತಿಯನ್ನು ( ಮೊಟ್ಟೆಗಳನ್ನಿಟ್ಟು, ಲಾರ್ವಾ ವ್ಯೂಹ, ಸೊಳ್ಳೆ) ವೃದ್ಧಿಸಿಕೊಳ್ಳುತ್ತದೆ. ಸೊಳ್ಳೆಗಳ ಮತ್ತು ಅದರ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಮೂಲಕ ನಿಯಂತ್ರಿಸಬಹುದು. ಮನೆ/ ಕಚೇರಿ/ ಸಂಸ್ಥೆಗಳ ಹೊರಗಿನ ಮಳೆ ನೀರು ನಿಲ್ಲುವ ಘನ ತ್ಯಾಜ್ಯ ವಸ್ತುಗಳಾದ ಒಡೆದ ಮಡಿಕೆಚೂರು, ತೆಂಗಿನಚಿಪ್ಪು, ಬಾಟಲುಗಳು, ಟೈರು, ಟೀ/ ಕಾಫಿ ಕುಡಿದು ಬೀಸಾಡಿದ ಲೋಟಗಳು, ಉಪಯೋಗಕ್ಕೆ ಬಾರದಂತಹ ನೀರು ನಿಲ್ಲುವ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಡಿ.ಎಚ್.ಓ. ಡಾ.ಎಸ್.ಎಸ್.ನೀಲಗುಂದ.

Editor

Leave a comment