Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಪಾರದರ್ಶಕ ಮತದಾರರ ಪಟ್ಟಿ ತಯಾರಿಕೆಗೆ ಬಿ.ಎಲ್.ಓಗಳ ಪಾತ್ರ ಪ್ರಮುಖವಾಗಿದೆ.ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಕುರಿತು ಸಭೆ. ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸ. ಕರುನಾಡು ಘರ್ಜುನೆ ಸುದ್ದಿ ಗದಗ ಮೇ 27: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಪಾರದರ್ಶಕ ಮತದಾರರ ಪಟ್ಟಿ…

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಕುರಿತು ಸಭೆ. ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸ.

ಕರುನಾಡು ಘರ್ಜುನೆ ಸುದ್ದಿ ಗದಗ ಮೇ 27: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಪಾರದರ್ಶಕ ಮತದಾರರ ಪಟ್ಟಿ ತಯಾರಿಕೆಗೆ ಬಿ.ಎಲ್.ಓಗಳ ಪಾತ್ರ ಪ್ರಮುಖವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -2026 ರ ಮ್ಯಾಪಿಂಗ್ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದರು. ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ದಿ:14-5-2026 ರಂದು ವೇಳಾ ಪಟ್ಟಿ ಪ್ರಕಟಿಸಿದೆ. ECI Net ತಂತ್ರಾAಶದಲ್ಲಿ ಮತದಾರ ಪಟ್ಟಿ ದತ್ತಾಂಶವು 16-6-2026 ರಂದು ಫ್ರೀಜ್ ಆಗುವುದರಿಂದ ಜಿಲ್ಲೆಗೆ ಸಂಬAಧಿಸಿದ 2002 ರ ಮತದಾರರ ಪಟ್ಟಿಗೆ 2025 ರ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಈ ನಿಟ್ಟಿನಲ್ಲಿ ಬಿ.ಎಲ್.ಓಗಳು ವಿಶೇಷ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧಿಸಿದAತೆ ಮನೆ ಮನೆಗೆ ಭೇಟಿ ನೀಡಿ ಸಮಗ್ರ ವಿಷಯಗಳ ಪರಿಶೀಲನೆ ನಡೆಸಬೇಕು. ಸ್ಥಳಾಂತರಗೊAಡ, ಮರಣ ಹೊಂದಿದ ಮತದಾರರ ಹೆಸರುಗಳ ಕಡೆ ವಿಶೇಷ ಗಮನ ಹರಿಸಬೇಕು. ಸಾಹಿತಿ, ಕ್ರೀಡಾಪಟು, ಪ್ರಶಸ್ತಿ ವಿಜೇತರು, ಎಂ.ಪಿ, ಎಂ.ಎಲ್, ಎ, ತಾ.ಪಂ. ಮಾಜಿ ಅಧ್ಯಕ್ಷ, ಗ್ರಾ.ಪಂ. ಸದಸ್ಯರು ಹೀಗೆ ವಿಐಪಿ ಹಾಗೂ ವಿವಿಐಪಿ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಬಾರದು.

ಈ ಕಾರ್ಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಮತ್ತು ಬಿ.ಎಲ್.ಏ ಗಳೊಂದಿಗೆ ಸಹಕರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಮ್ಯಾಪಿಂಗ್ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು. ಜಿಲ್ಲೆಯ ಮತದಾರರ ಪಟ್ಟಿ ಸಮಗ್ರ ಪರಿಷ್ಕಣೆ ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾ ತಹಶೀಲ್ದಾರರಾದ ಸಂತೋಷ ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತುದಾರರಾದ ಬಿ.ಜಿ.ಗಿರಿತಮ್ಮಣ್ಣವರ ಮಾತನಾಡಿ ಬಿ.ಎಲ್.ಓಗಳು ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಿರ್ವಹಿಸಬೇಕಾದ ಕರ್ತವ್ಯಗಳ ವಿವರಿಸಿದರು. ಆರೋಗ್ಯಯುತ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬಿ.ಎಲ್.ಓಗಳ ಪಾತ್ರ ಪ್ರಮುಖವಾಗಿದೆ. ಬಿ.ಎಲ್.ಓಗಳು ತಮ್ಮ ಮತಗಟ್ಟೆಯ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರೊಂದಿಗೆ ವಿನಮ್ರತೆಯಿಂದ ವರ್ತಿಸಿ ಮಾಹಿತಿ ಪಡೆದುಕೊಳ್ಳಬೇಕು.

ಈ ಸಂದರ್ಭದಲ್ಲಿ ಮತದಾರರ ನೊಂದಣಾಧಿಕಾರಿಗಳಾದ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎಸ್.ಡಿ,ಪಾಟೀಲ, ಜಿಲ್ಲೆಯ ಎಲ್ಲ ಸಹಾಯಕ ಮತದಾರರ ನೊಂದಣಾಧಿಕಾರಿಗಳು ಹಾಗೂ ತಹಶೀಲ್ದಾರರು, ಬಿ.ಎಲ್.ಓಗಳು ಹಾಗೂ ಬಿ.ಎಲ್.ಓ ಮೇಲ್ವಿಚಾರಕರು ಹಾಜರಿದ್ದರು.

Editor

Leave a comment