Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಎಪಿಎಂಸಿಯಲ್ಲಿ ವಿದ್ಯುತ್ ವ್ಯತ್ಯಯ: ಕತ್ತಲಲ್ಲಿ..! ವ್ಯಾಪಾರ ನಡೆಸುತ್ತಿರುವ ರೈತರು-ವ್ಯಾಪಾರಸ್ಥರು, ಅಧಿಕಾರಿಗಳ ವಿರುದ್ಧ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ ಗದಗ, ಜೂನ್ 3: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಬುಧವಾರ ಮುಂಜಾನೆ ಸುಮಾರು 3 ಗಂಟೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡ ಪರಿಣಾಮ ರೈತರು ಹಾಗೂ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿದಿನ ನೂರಾರು…

ಕರುನಾಡು ಘರ್ಜನೆ ಸುದ್ದಿ ಗದಗ, ಜೂನ್ 3: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಬುಧವಾರ ಮುಂಜಾನೆ ಸುಮಾರು 3 ಗಂಟೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತಗೊಂಡ ಪರಿಣಾಮ ರೈತರು ಹಾಗೂ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರತಿದಿನ ನೂರಾರು ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟಕ್ಕಾಗಿ ಎಪಿಎಂಸಿಗೆ ತರುತ್ತಿದ್ದು, ವ್ಯಾಪಾರ ವಹಿವಾಟುಗಳು ಮುಂಜಾನೆ ವೇಳೆಯಲ್ಲೇ ಆರಂಭವಾಗುತ್ತವೆ. ಆದರೆ ವಿದ್ಯುತ್ ಇಲ್ಲದ ಕಾರಣ ಸಂಪೂರ್ಣ ಆವರಣ ಕತ್ತಲಲ್ಲಿ ಮುಳುಗಿದ್ದು, ರೈತರು ಹಾಗೂ ವ್ಯಾಪಾರಸ್ಥರು ಮೊಬೈಲ್ ಟಾರ್ಚ್ ಹಾಗೂ ವಾಹನಗಳ ಬೆಳಕಿನ ನೆರವಿನಿಂದ ಕೆಲಸ ನಿರ್ವಹಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯುತ್ ವ್ಯತ್ಯಯದಿಂದ ತೂಕದ ಯಂತ್ರಗಳ ಬಳಕೆ, ಸರಕುಗಳ ವಿಂಗಡಣೆ ಹಾಗೂ ಹರಾಜು ಪ್ರಕ್ರಿಯೆಗಳು ಸಹ ಅಸ್ತವ್ಯಸ್ತಗೊಂಡಿವೆ. ಇದರಿಂದ ರೈತರು ಸಮಯ ಹಾಗೂ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಹಲವು ಗಂಟೆಗಳ ಕಾಲ ವಿದ್ಯುತ್ ಇಲ್ಲದಿದ್ದರೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಹಾಗೂ ಸಮಸ್ಯೆ ಪರಿಹರಿಸುವಲ್ಲಿ ನಿರ್ಲಕ್ಷ್ಯ ತೋರಿರುವುದಕ್ಕೆ ರೈತರು ಮತ್ತು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ರಾತ್ರಿ 3 ಗಂಟೆಯಿಂದ ಕರೆಂಟ್ ಇಲ್ಲ. ಕತ್ತಲಲ್ಲಿ ವ್ಯಾಪಾರ ಮಾಡುವುದು ಹೇಗೆ? ರೈತರು ಮತ್ತು ವ್ಯಾಪಾರಸ್ಥರ ಸಮಸ್ಯೆ ಕೇಳುವವರೇ ಇಲ್ಲ. ಎಪಿಎಂಸಿ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ವಿದ್ಯುತ್ ಸಮಸ್ಯೆ ಪರಿಹರಿಸಿ, ಎಪಿಎಂಸಿ ಆವರಣದಲ್ಲಿ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಅಲ್ಲದೆ ಇಂತಹ ಸಮಸ್ಯೆಗಳು ಮರುಕಳಿಸದಂತೆ ಜನರೇಟರ್ ಸೇರಿದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಹಾಗೂ ವ್ಯಾಪಾರಸ್ಥರು ಆಗ್ರಹಿಸಿದ್ದಾರೆ.

Editor

Leave a comment