Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

  ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸೂಕ್ತ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ: ತಪ್ಪಿದಲ್ಲಿ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯ ಎಚ್ಚರಿಕೆ!

ಕರುನಾಡು ಘರ್ಜನೆ ಸುದ್ದಿ ಗದಗ: ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಜನಪ್ರಿಯ, ಶೋಷಿತರ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಾಯಕರಾದ ಮಾನ್ಯ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಅರ್ಹ ಸಚಿವ ಸ್ಥಾನ ಹಾಗೂ…

ಕರುನಾಡು ಘರ್ಜನೆ ಸುದ್ದಿ ಗದಗ: ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಜನಪ್ರಿಯ, ಶೋಷಿತರ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಾಯಕರಾದ ಮಾನ್ಯ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಅರ್ಹ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ (DyCM) ಹುದ್ದೆಯನ್ನು ನೀಡಬೇಕೆಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಈ ಪತ್ರಿಕಾಗೋಷ್ಠಿಯ ಮೂಲಕ ಸರ್ಕಾರವನ್ನು ಅತ್ಯಂತ ಒತ್ತಾಯಪೂರ್ವಕವಾಗಿ ಆಗ್ರಹಿಸುತ್ತದೆ.

ಮಾನ್ಯ ಜಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ರಾಜ್ಯದಾದ್ಯಂತ ಎಲ್ಲಾ ವರ್ಗದ ಬಡವರ, ದೀನದಲಿತರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ನಾಡಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಯಶಸ್ಸಿನಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿ ಹೇಳಿದರು.

ದಿನಾಂಕ 03-06-2026 ರಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಕಚೇರಿಯಲ್ಲಿ ನಡೆದ ತುರ್ತು ಖಂಡನಾ ಸಭೆಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷರಾದ ಮಹ್ಮದಶಫಿ ನಾಗರಕಟ್ಟಿ ಇತ್ತೀಚಿನ ದಿನಗಳಲ್ಲಿ ಮಾನ್ಯ ಜಮೀರ್ ಅಹ್ಮದ್ ಖಾನ್ ಅವರ ರಾಜಕೀಯ ಬೆಳವಣಿಗೆ ಹಾಗೂ ಜನಪ್ರಿಯತೆಯನ್ನು ಸಹಿಸದ ಕೆಲವು ರಾಜಕೀಯ ವಿರೋಧಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳು ಅವರ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರಗಳನ್ನು ರೂಪಿಸುತ್ತಿದ್ದಾರೆ. ಅವರ ವಿರುದ್ಧ ಕೇಳಿಬರುತ್ತಿರುವ ಎಲ್ಲಾ ಆಪಾದನೆಗಳು ಸಂಪೂರ್ಣವಾಗಿ ನಿರಾಧಾರ, ಸುಳ್ಳು ಮತ್ತು ರಾಜಕೀಯ ಪ್ರೇರಿತವಾಗಿವೆ. ಜಮೀರ್ ಅಹ್ಮದ್ ಖಾನ್ ಅವರ ವರ್ಚಸ್ಸಿಗೆ ಮಸಿ ಬಳಿಯುವ ಇಂತಹ ಕುತಂತ್ರದ ನಡೆಗಳನ್ನು ಮಹಾಸಭಾವೂ ತೀವ್ರವಾಗಿ ಖಂಡಿಸುತ್ತದೆ. ನಾಡಿನ ಜನತೆಗೆ ಇವರ ಇಂತಹ ಸದುದ್ದೇಶದ ಸಮಾಜಸೇವೆಯ ಅರಿವಿದ್ದು, ವಿರೋಧಿಗಳ ಯಾವುದೇ ಆಟ ಇಲ್ಲಿ ನಡೆಯುವುದಿಲ್ಲ. ಸಮುದಾಯದ ಹಿರಿಯ ನಾಯಕರಾಗಿರುವ ಹಾಗೂ ಜನಸಾಮಾನ್ಯರ ಆಶಾಕಿರಣವಾಗಿರುವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅತ್ಯಂತ ಅನಿವಾರ್ಯವಾಗಿದೆ. ಇವರ ಜೊತೆಗೆ ಉತ್ತರ ಕರ್ನಾಟಕ ಭಾಗದಿಂದ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಜನಸಂಖ್ಯೆ ಆಧಾರಿತವಾಗಿ ಉತ್ತರ ಕರ್ನಾಟಕದ ಮೂರು ಶಾಸಕರಿಗೆ ಮತ್ತು ದಕ್ಷಿಣ ಕರ್ನಾಟಕದ ಮೂರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಸರ್ಕಾರ ಇವರ ಹಿರಿತನ, ಸೇವೆ ಮತ್ತು ನಾಯಕತ್ವವನ್ನು ನಿರ್ಲಕ್ಷಿಸಿ, ಸೂಕ್ತ ಸ್ಥಾನಮಾನಗಳನ್ನು ನೀಡಲು ವಿಫಲವಾದರೆ, ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ವತಿಯಿಂದ ಇಡೀ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾಧ್ಯಕ್ಷರಾದ ಜಾಫರ್ ಡಾಲಾಯತ್ ಮಾತನಾಡಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಮುದಾಯದ ಆಕ್ರೋಶವನ್ನು ವ್ಯಕ್ತಪಡಿಸಬೇಕಾಗುತ್ತದೆ ಎಂದು ಈ ಮೂಲಕ ಕಡಾಖಂಡಿತವಾಗಿ ಎಚ್ಚರಿಸಿದರು. ಶಹರ ಅಧ್ಯಕ್ಷರಾದ ತಾಜುದ್ದೀನ್ ಪಾಪಣ್ಣವರು ಮಾತನಾಡಿ ನಮ್ಮ ನ್ಯಾಯ ಸಮ್ಮತವಾದ ಈ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಯಾವುದೇ ರಾಜಕೀಯ ಪಿತೂರಿಗಳಿಗೆ ಮಣಿಯದೆ ಮಾನ್ಯ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ತಕ್ಷಣವೇ ಉನ್ನತ ಸ್ಥಾನಮಾನಗಳನ್ನು ಘೋಷಿಸಬೇಕೆಂದರು. ಪ್ರಧಾನ ಕಾರ್ಯದರ್ಶಿಗಳಾದ ರಿಯಾಜ್ ಅಹ್ಮದ ದೊಡ್ಡಮನಿ ಮಾತನಾಡಿ ಕಾಂಗ್ರೆಸ್ ಪಕ್ಷವು ಜಾತ್ಯತೀತತ್ವದ ಅಡಿಯಲ್ಲಿ ಬಂದಿರುವಂತ ಪಕ್ಷವಾಗಿದೆ ಅದನ್ನು ಮುಂದುವರೆಸಿಕೊಂಡು ಹೋಗೋದು ಕಾಂಗ್ರೆಸ್ ಹೈಕಮಾಂಡಿನ ಜವಾಬ್ದಾರಿಯಾಗಿದೆ. ವಿಶೇಷ ಅತಿಥಿಯಾಗಿ ಆಗಮಿಸಿದ ಮುಂಡರಗಿ ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಡಿ ಎಂ ಕಾತರಿಕಿ ಮಾತನಾಡಿ ಅಲ್ಪಸಂಖ್ಯಾತರು ಯಾವತ್ತು ಕಾಂಗ್ರೆಸ್ ಪಕ್ಷದ ಪರವಾಗಿದ್ದು ಪಕ್ಷದ ಗೆಲುವಿಗೆ ಪ್ರಮುಖ ಕಾರಣಿ ಭೂತರಾಗಿದ್ದಾರೆ. ಕಾಂಗ್ರೆಸ್ ಅಂದರೆ ಅಲ್ಪಸಂಖ್ಯಾತರು ಅಲ್ಪಸಂಖ್ಯಾತರಂದರೆ ಕಾಂಗ್ರೆಸ್ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವಂತಹ ಸಂದರ್ಭದಲ್ಲಿ ಪಕ್ಷವು ಸರಿಯಾದ ತೀರ್ಮಾನವನ್ನು ತೆಗೆದುಕೊಂಡು ಅಲ್ಪಸಂಖ್ಯಾತರಿಗೆ ನ್ಯಾಯವನ್ನು ಒದಗಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಹ್ಮದಶಫಿ ನಾಗರಕಟ್ಟೆ ರಾಜ್ಯಅಧ್ಯಕ್ಷರು, ಜಾಫರ್ ಡಾಲಾಯತ್ ಜಿಲ್ಲಾಧ್ಯಕ್ಷರು. ತಾಜುದ್ದೀನ್ ಪಾಪಣ್ಣನವರ್ ಗದಗ ಶಹರ ಅಧ್ಯಕ್ಷರು,ಕುತ್ಬುದ್ದೀನ್ ಶೇಖ ಗದಗ ಶಹರ ಉಪಾಧ್ಯಕ್ಷರು, ರಿಯಾಜ್ ಅಹಮದ್ ದೊಡಮನಿ ಗದಗ ಶಹರ ಪ್ರಧಾನ ಕಾರ್ಯದರ್ಶಿಗಳು, ಭಾಷಾಸಾಬ್ ಸಾಬ ಖಾಜಿ, ರಫೀಕ್ ಈಟಿ, ನಿಜಾಮುದ್ದೀನ್ ಕಾಟಾಪುರ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಪ್ರಮುಖರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

 

Editor

Leave a comment