Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಕೊಪ್ಪಳ: ಬಹಾರ ಪೇಟೆ ಶಾಲೆಗೆ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮನವಿ.

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ನಗರದ ಬಹಾರ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ನೇಮಕ್ಕೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಅವರಿಗೆ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಬಹಾರ ಪೇಟೆ ಶಾಲಾ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ನಗರದ ಬಹಾರ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ನೇಮಕ್ಕೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಅವರಿಗೆ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಬಹಾರ ಪೇಟೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಜಂಟಿಯಾಗಿ ಮನವಿ ಸಲ್ಲಿಸಿದರು.
ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಎಪ್ಪತ್ತಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮಂಜೂರಾಗಿದ್ದ ಶಿಕ್ಷಕರ ಹುದ್ದೆ ಐದರಲ್ಲಿ ಕರ್ತವ್ಯದಲ್ಲಿದ್ದ ನಾಲ್ಕು ಜನ ಶಿಕ್ಷಕರಲ್ಲಿ ಒಬ್ಬರು ಮುಂಬಡ್ತಿ ಹೊಂದಿ ವರ್ಗವಾಗಿದ್ದು. ಮೂರು ಶಿಕ್ಷಕರು ಮಾತ್ರ ಸೇವೆಯಲ್ಲಿ ಉಳಿದಿದ್ದಾರೆ. ಒಂದರಿಂದ ಏಳನೇ ತರಗತಿಯ ಮಕ್ಕಳಿಗೆ ಪ್ರತ್ಯೇಕ ಬೋಧನೆ ಆಲಿಸಲು ಅನುಕೂಲಕರವಾದ ವಾತಾವರಣವನ್ನು ಇಲ್ಲದೆ.ಎರಡ್ಮೂರು ವರ್ಗಗಳನ್ನು ಒಂದೇ ಕಡೆ ನಡೆಸುವ ಅನಿವಾರ್ಯತೆ ಇದೆ. ಒಬ್ಬರನ್ನು ಖಾಯಂ ಶಿಕ್ಷಕರನ್ನು ನೇಮಕ ಮಾಡಿ. ಇನ್ನೊಬ್ಬರು ಇಂಗ್ಲಿಷ್ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದರೆ ಕನಿಷ್ಠ ಸಮರ್ಪಕವಾಗಿ ಬೋಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸ್ವೀಕರಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಮಾತನಾಡಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಿದರು.
ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ಎ.ಗಫಾರ್ ಮಾತನಾಡಿ ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ಕನ್ನಡ. ಇಂಗ್ಲಿಷ್ ಓದಲು ಬರೆಯಲು ಕಲಿಸುವದರೊಂದಿಗೆ ಎಲ್ಲಾ ವಿಷಯಗಳು ಬೋಧನೆ ಮಾಡುವುದು ಬುನಾದಿ ಶಿಕ್ಷಣ.ಜಿಲ್ಲೆಯಲ್ಲಿ ಒಂದೆರಡು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆಯೊಂದರ ಪ್ರಕಾರ ಪ್ರೌಢ ಶಾಲಾ ಮಕ್ಕಳಿಗೆ ಅ ಆ ಇ ಈ ಸರಿಯಾಗಿ ಬರೆಯಲು ಬರುತ್ತಿಲ್ಲ ಎಂಬ ಮಾಹಿತಿ ಬಂದಿದೆ.ಹೀಗಾಗಿ ಪ್ರಾಥಮಿಕ ಶಾಲೆಯಲ್ಲಿ ಅಗತ್ಯ ಶಿಕ್ಷಕರ ನೇಮಕ ಮಾಡಿ ಎಂದು ಒತ್ತಾಯಿಸಿದರು.
ಬಹಾರ ಪೇಟೆ ಶಾಲೆಗೆ ಭೇಟಿ ನೀಡುತ್ತೇನೆ.ಮುಂದಿನ ನೇಮಕಾತಿಯಲ್ಲಿ ಇಂಗ್ಲಿಷ್ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಆದ್ಯತೆ ನೀಡೋಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಆಶ್ವಾಸನೆ ನೀಡಿದರು.
ಬಹಾರ ಪೇಟೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ನಾಸಿರುದ್ದೀನ್ ಎಸ್.ಮಾಳೆಕೊಪ್ಪ. ಕೆಪಿಸಿಸಿ ಶಿಕ್ಷಕರ ಘಟಕದ ಜಿಲ್ಲಾ ಕಾರ್ಯದರ್ಶಿ ಉಮೇಶ್ ಸುರ್ವೆ ಮುಂತಾದವರು ಉಪಸ್ಥಿತರಿದ್ದರು.

Editor

Leave a comment