Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ.

ಕರುನಾಡು ಘರ್ಜುನೆ ಸುದ್ದಿ ಗದಗ, ಜೂನ್ 5: ಕೆ. ವಿ. ಹಂಚಿನಾಳ ನರ್ಸಿಂಗ್ ಕಾಲೇಜು, ಗದಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. “ಪ್ರಕೃತಿಯಿಂದ ಪ್ರೇರಣೆ – ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಈ ವರ್ಷದ ಘೋಷವಾಕ್ಯದಡಿ ಪರಿಸರ…

ಕರುನಾಡು ಘರ್ಜುನೆ ಸುದ್ದಿ ಗದಗ, ಜೂನ್ 5: ಕೆ. ವಿ. ಹಂಚಿನಾಳ ನರ್ಸಿಂಗ್ ಕಾಲೇಜು, ಗದಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. “ಪ್ರಕೃತಿಯಿಂದ ಪ್ರೇರಣೆ – ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಈ ವರ್ಷದ ಘೋಷವಾಕ್ಯದಡಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ವಹಿಸಿಕೊಂಡಿದ್ದು, ಮುಖ್ಯ ಅತಿಥಿಗಳಾಗಿ ಡಾ. ರಮೇಶ್ ಮಯ್ಯಪ್ಪನವರ ಹಾಗೂ ಡಾ. ವೀರೇಶ್ ಹಂಚಿನಾಳ ಭಾಗವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಅತಿಥಿಗಳನ್ನು ಸಸಿಗಳನ್ನು ನೀಡಿ ಸ್ವಾಗತಿಸಿ, ಪರಿಸರ ಸ್ನೇಹಿ ಸಂದೇಶ ಸಾರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅತಿಥಿಗಳು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಪೋಷಿಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ಪ್ರಕೃತಿ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಲ್ಲಿ ವೃಕ್ಷಾರೋಪಣೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.

ನಂತರ ಕಾಲೇಜಿನಿಂದ ಸೇವಾಲಾಲ್ ವೃತ್ತದವರೆಗೆ ಪರಿಸರ ಜಾಗೃತಿ ವಾಕಥಾನ್ ಆಯೋಜಿಸಲಾಯಿತು. ವಾಕಥಾನ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿ, ಪರಿಸರ ಸಂರಕ್ಷಣೆ ಕುರಿತು ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಹಸಿರು ಪರಿಸರ ನಿರ್ಮಾಣ, ನೀರಿನ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದ ಸಂದೇಶವನ್ನು ಜನತೆಗೆ ತಲುಪಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, “ಪರಿಸರ ಉಳಿಸಿ – ಭವಿಷ್ಯ ಬೆಳೆಸಿ” ಎಂಬ ಸಂದೇಶದೊಂದಿಗೆ ಸಮಾರೋಪಗೊಂಡಿತು.

ಕೆ. ವಿ. ಹಂಚಿನಾಳ ನರ್ಸಿಂಗ್ ಕಾಲೇಜು, ಗದಗ

Editor

Leave a comment