ಕರುನಾಡು ಘರ್ಜುನೆ ಸುದ್ದಿ ಗದಗ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ಕೆ. ಪಾಟೀಲ್ ಅವರಿಗೆ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರು ಶ್ರೀ ಅಬ್ದುಲ್ ಮುನಾಫ್ ಮುಲ್ಲಾ ಅವರು ಸರಕಾರಕ್ಕೆ ಹಾಗೂ ಪಕ್ಷದ ವರಿಷ್ಠರಿಗೆ ಆಗ್ರಹ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಅನುಭವಿ ಆಡಳಿತಗಾರ ಹಾಗೂ ಜನಪರ ನಾಯಕರಾದ ಹೆಚ್ ಕೆ ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಿ ಕ್ಯಾಬಿನೆಟ್ ಸಚಿವರಾಗಿ ನೇಮಕ ಮಾಡಬೇಕೆಂದು ನಾನು ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರಲ್ಲಿ ವಿನಂತಿಸಿಕೊಳ್ಳುತ್ತೇನೆ.
ಶ್ರೀ ಎಚ್.ಕೆ. ಪಾಟೀಲ್ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ, ಅಭಿವೃದ್ಧಿ ಪರ ಚಿಂತನೆ ಹಾಗೂ ಜನಸೇವೆಯ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿಕೊಂಡಿದ್ದಾರೆ. ಗದಗ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಅವರ ಅನುಭವ, ಆಡಳಿತ ಕೌಶಲ್ಯ ಮತ್ತು ಜನರ ಸಮಸ್ಯೆಗಳ ಬಗ್ಗೆ ಇರುವ ಕಾಳಜಿ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ.
ಉತ್ತರ ಕರ್ನಾಟಕದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಪಕ್ಷ ಸಂಘಟನೆಗಾಗಿ ದೀರ್ಘಕಾಲದಿಂದ ಸೇವೆ ಸಲ್ಲಿಸಿರುವ ಎಚ್.ಕೆ. ಪಾಟೀಲ್ ಅವರಂತಹ ಹಿರಿಯ ನಾಯಕರನ್ನು ಸಚಿವ ಸಂಪುಟದಲ್ಲಿ ಮೊದಲನೇ ಹಂತದಲ್ಲಿ ಸಚಿವ ಸ್ಥಾನ ನೀಡದಿರುವ ಕಾರಣ ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಅಸಮಾಧಾನ ಹೆಚ್ಚುತ್ತಿರುವುದು ಕಂಡುಬರುತ್ತಿದೆ.
ಪಕ್ಷದ ವರಿಷ್ಠರು ಹಾಗೂ ರಾಜ್ಯ ಸರ್ಕಾರವು ಉತ್ತರ ಕರ್ನಾಟಕದ ಜನರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮುಂದಿನ ಹಂತದ ಸಚಿವ ಸಂಪುಟದಲ್ಲಿ ಶ್ರೀ ಎಚ್.ಕೆ. ಪಾಟೀಲ್ ಅವರಿಗೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಉತ್ತರ ಕರ್ನಾಟಕ ಭಾಗದಲ್ಲಿ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದು ಪಕ್ಷದ ಸಂಘಟನೆ ಮತ್ತು ಜನಾಭಿಪ್ರಾಯದ ಮೇಲೂ ಪರಿಣಾಮ ಬೀರಬಹುದು.ಆದ್ದರಿಂದ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ, ಉತ್ತರ ಕರ್ನಾಟಕದ ಜನರ ಆಶಯಕ್ಕೆ ಗೌರವ ನೀಡಿ, ಮುಂದಿನ ಹಂತದ
ಸಚಿವ ಸಂಪುಟ ವಿಸ್ತರಣೆಯಲ್ಲಿ ಶ್ರೀ ಎಚ್.ಕೆ. ಪಾಟೀಲ್ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ನಾನು ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರನ್ನು ಒತ್ತಾಯಿಸುತ್ತೇನೆ.
ಅಬ್ದುಲ್ ಮುನಾಫ್ ಮುಲ್ಲಾ
9741302192