ಕರುನಾಡು ಘರ್ಜನೆ ಸುದ್ದಿ ಗದಗ, ಜೂನ್ 15: ಗದಗ ನಗರದ ಹೊಂಬಳನಾಕ ಜನತಾ ಕಾಲೋನಿ 16ನೇ ವಾರ್ಡಿನ ನಿವಾಸಿಗಳು ಕಳೆದ 15 ದಿನಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನಿರಂತರವಾಗಿ ನೀರು ಸರಬರಾಜಾಗದೇ ಇರುವುದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಲೋನಿಯ ನಿವಾಸಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಮನೆಗಳಿಗೆ ನೀರು ಸರಬರಾಜಾಗಿಲ್ಲ. ಇದರಿಂದ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ದೂರದ ಪ್ರದೇಶಗಳಿಂದ ನೀರು ತಂದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಹಾಗೂ ಉಷ್ಣತೆಯ ನಡುವೆ ನೀರಿನ ಕೊರತೆ ಮತ್ತಷ್ಟು ಸಮಸ್ಯೆ ಉಂಟುಮಾಡಿದೆ.
ಈ ಕುರಿತು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೀರಿನ ಸಮಸ್ಯೆ ಪರಿಹರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸ್ಥಳೀಯ ನಿವಾಸಿಗಳು ಮಾತನಾಡಿ, “ಕುಡಿಯುವ ನೀರಿಗಾಗಿ ಪ್ರತಿದಿನ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ತಕ್ಷಣ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ. ನಗರಸಭೆ ಅಧಿಕಾರಿಯೋದ ಲಕ್ಷ್ಮಣ್ ಜೋಗದಂಡಕರ್ ಪೋನ್ ಕಾಲ್ ಮಾಡಿದ್ರು ಕಾಲ್ ರಿಸೀವ್ ಮಾಡೋದಿಲ್ಲ, ಈ ಹಿಂದೆ ಕೂಡ ಲಕ್ಷ್ಮಣ್ ಅವರು ಒಂದು ತಿಂಗಳ ವರಿಗೆ ಹೊಂಬಳನಾಕ ಜನತಾ ಕಾಲೋನಿಯ ಸಮಸ್ಯೆ ಬಗೆ ಹರಿಸುವೆ ಅಂತ ನಮ್ಮ ಚಾನೆಲ್ ಮುಖಾಂತರ ಬೈಟ್ ಕೊಟ್ಟಿದರು ಆದರೆ ಇವಾಗ ಓಣಿ ಒಂದು ಕೆಲಸ ಕೂಡ ಆಗಿಲ್ಲ ಮಾತಿಗೆ ತಪ್ಪದ ಅಧಿಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ, ಶೀಘ್ರದಲ್ಲೇ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಸಮಸ್ಯೆ ಮುಂದುವರಿದರೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.