Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಜಂಗ್ಲಿಯವರ ನಿವೃತ್ತಿ: ಸಾರ್ಥಕ ಸೇವೆಗೆ ಸನ್ಮಾನ

ಕರುನಾಡು ಘರ್ಜುನೆ ಸುದ್ದಿ ಗದಗ, ಜೂ. 20: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷರಾದ ಹಾಗೂ ಸಂಘಟನಾ ಚತುರರೆಂದೇ ಹೆಸರಾದ ಶ್ರೀ ಎಂ.ಎಚ್. ಜಂಗ್ಲಿಯವರು ನಿವೃತ್ತಿ ಹೊಂದಿದ ಪ್ರಯುಕ್ತ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ…

ಕರುನಾಡು ಘರ್ಜುನೆ ಸುದ್ದಿ ಗದಗ, ಜೂ. 20: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷರಾದ ಹಾಗೂ ಸಂಘಟನಾ ಚತುರರೆಂದೇ ಹೆಸರಾದ ಶ್ರೀ ಎಂ.ಎಚ್. ಜಂಗ್ಲಿಯವರು ನಿವೃತ್ತಿ ಹೊಂದಿದ ಪ್ರಯುಕ್ತ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಬಸವರಾಜ ವೆಂಕಪ್ಪ ಬಳ್ಳಾರಿಯವರು ಜಂಗ್ಲಿಯವರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ಸಂಘಟನೆ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಸೇವೆ ಅನನ್ಯವಾದದ್ದು ಎಂದು ಕೊಂಡಾಡಿದರು.

ಜಂಗ್ಲಿಯವರು ತಮ್ಮ ಸೇವಾವಧಿಯಲ್ಲಿ ಶಿಕ್ಷಕರ ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸಿದ್ದು, ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಶಿಕ್ಷಕರ ಸಮುದಾಯದ ವಿಶ್ವಾಸ ಗಳಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಮತ್ತು ನಾಯಕತ್ವ ಗುಣಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು.

ಮುಂದೆ ಮಾತನಾಡಿದ ಅವರು, ನಿವೃತ್ತಿ ಜೀವನವು ಜಂಗ್ಲಿಯವರಿಗೆ ಆರೋಗ್ಯ, ನೆಮ್ಮದಿ, ಸಂತೋಷ ಮತ್ತು ಸಮೃದ್ಧಿಯನ್ನು ತಂದುಕೊಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ರಾಜು ಕಂಟಿಗೊಣ್ಣವರ, ಪ್ರಲ್ಹಾದ ಗೆಜ್ಜಿ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ರಾಜು ನರಗುಂದ, ಕರೀಮಸಾಬ ಸುಣಗಾರ, ಎಸ್.ಎಸ್. ಪಾರ್ವತಿಮಠ, ರಾಜಕುಮಾರ ಸೊಪಡ್ಲ,   ಎಚ್.ಎಫ್. ಶರೀಫನವರ ಎಸ್,ಎಚ್,ಬದನಟ್ಟಿ ಅನೇಕರು ಉಪಸ್ಥಿತರಿದ್ದು, ಜಂಗ್ಲಿಯವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮವು ಆತ್ಮೀಯತೆ ಹಾಗೂ ಗೌರವದ ವಾತಾವರಣದಲ್ಲಿ ನಡೆಯಿತು.

Editor

Leave a comment