ಕರುನಾಡು ಘರ್ಜುನೆ ಸುದ್ದಿ ಹುಲಕೋಟಿ, ಜೂ. 20: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾದ ಶ್ರೀ ಇಮಾಮಸಾಬ ಗಾಡಗೊಳಿಯವರ ಜನ್ಮದಿನವನ್ನು ಹುಲಕೋಟಿಯಲ್ಲಿರುವ ಅವರ ಸ್ವಗೃಹದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಬಸವರಾಜ ವೆಂಕಪ್ಪ ಬಳ್ಳಾರಿಯವರು ಕೇಕ್ ಕತ್ತರಿಸುವ ಮೂಲಕ ಜನ್ಮದಿನದ ಸಂಭ್ರಮಾಚರಣೆಗೆ ಚಾಲನೆ ನೀಡಿ, ಇಮಾಮಸಾಬ ಗಾಡಗೊಳಿಯವರ ನೌಕರರ ಸಂಘಟನೆಗಾಗಿ ಸಲ್ಲಿಸಿರುವ ಸೇವೆ, ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಹಾಗೂ ಅವರ ಸರಳ ವ್ಯಕ್ತಿತ್ವವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಾಡಗೊಳಿಯವರು ನೌಕರರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರಾಜ್ಯ ಮಟ್ಟದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ನೌಕರರ ವಲಯದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿಗಳಾದ ರಾಜು ಕಂಟಿಗೊಣ್ಣವರ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ಎಸ್.ಎಸ್. ಪಾರ್ವತಿಮಠ, ಎಚ್.ಎಫ್. ಶರೀಫನವರ, ಕರೀಮಸಾಬ ಸುಣಗಾರ ಎಸ್,ಎಚ್ ಬದನಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಗಾಡಗೊಳಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಿದರು.
ಕೊನೆಯಲ್ಲಿ ಇಮಾಮಸಾಬ ಗಾಡಗೊಳಿಯವರು ಎಲ್ಲರ ಶುಭಾಶಯಗಳಿಗೆ ಕೃತಜ್ಞತೆ ಸಲ್ಲಿಸಿದರು.