Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಬೆಂಗಳೂರು l”ಭೂ ಗ್ಯಾರಂಟಿ ಯೋಜನೆ” ಖಾತಾ ಮೇಳಕ್ಕೆ ಭರ್ಜರಿ ಸ್ಪಂದನೆ: ಗೋವಿಂದರಾಜನಗರ ಅಭಿವೃದ್ಧಿಗೆ ಶಾಸಕ ಪ್ರಿಯಕೃಷ್ಣರ ವಿಶೇಷ ಒತ್ತು.

ಕರುನಾಡು ಘರ್ಜುನೆ ಸುದ್ದಿ : ಬೆಂಗಳೂರು, ಜೂನ್ 20: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 6ನೇ ಗ್ಯಾರಂಟಿ ಯೋಜನೆಯಾದ “ಭೂ ಗ್ಯಾರಂಟಿ ಯೋಜನೆ” ಅಡಿಯಲ್ಲಿ ಆಯೋಜಿಸಲಾದ “ಖಾತಾ ಮೇಳ” ಹಾಗೂ ನನ್ನ ಇ-ಖಾತಾ (B to A) ಪರಿವರ್ತನೆ ಅಭಿಯಾನ ಕಾರ್ಯಕ್ರಮಕ್ಕೆ ಗೋವಿಂದರಾಜನಗರ…

ಕರುನಾಡು ಘರ್ಜುನೆ ಸುದ್ದಿ : ಬೆಂಗಳೂರು, ಜೂನ್ 20: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 6ನೇ ಗ್ಯಾರಂಟಿ ಯೋಜನೆಯಾದ “ಭೂ ಗ್ಯಾರಂಟಿ ಯೋಜನೆ” ಅಡಿಯಲ್ಲಿ ಆಯೋಜಿಸಲಾದ “ಖಾತಾ ಮೇಳ” ಹಾಗೂ ನನ್ನ ಇ-ಖಾತಾ (B to A) ಪರಿವರ್ತನೆ ಅಭಿಯಾನ ಕಾರ್ಯಕ್ರಮಕ್ಕೆ ಗೋವಿಂದರಾಜನಗರ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಸಹಯೋಗದಲ್ಲಿ ನಾಯಂಡನಹಳ್ಳಿ ಸರ್ಕಲ್ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ನಾಗರಿಕರು ಭಾಗವಹಿಸಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಪ್ರಿಯಕೃಷ್ಣ, ಜನರ ಆಸ್ತಿ ಹಕ್ಕುಗಳನ್ನು ಭದ್ರಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಭೂ ಗ್ಯಾರಂಟಿ ಯೋಜನೆ” ಅತ್ಯಂತ ಜನಪರ ಯೋಜನೆಯಾಗಿದ್ದು, 100 ದಿನಗಳ ವಿಶೇಷ ಅವಧಿಯಲ್ಲಿ ಕೇವಲ ಶೇ.2ರ ಶುಲ್ಕ ಪಾವತಿಸಿ B ಖಾತಾವನ್ನು A ಖಾತಾಗೆ ಪರಿವರ್ತಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಸಕ ಪ್ರಿಯಕೃಷ್ಣ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆ ಸುಧಾರಣೆ, ಕುಡಿಯುವ ನೀರಿನ ಪೂರೈಕೆ, ಉದ್ಯಾನವನಗಳ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಪ್ರತಿನಿಧಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರ ಪ್ರದೇಶದ ಸಮಗ್ರ ಅಭಿವೃದ್ಧಿಯೊಂದಿಗೆ ನಾಗರಿಕರಿಗೆ ಸರ್ಕಾರಿ ಯೋಜನೆಗಳ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅವರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ವಸತಿ ಸಚಿವರು ಹಾಗೂ ಹಿರಿಯ ಮುಖಂಡರಾದ ಶ್ರೀ ಕೃಷ್ಣಪ್ಪ, ಸ್ಥಳೀಯ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಭೂ ಮಾಲೀಕರಿಗೆ ಅನುಕೂಲವಾಗುವ ಈ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದು, ಆಸ್ತಿ ದಾಖಲೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.

“ಜನರ ಅಭಿವೃದ್ಧಿಯೇ ನನ್ನ ಧ್ಯೇಯ; ಪ್ರತಿಯೊಬ್ಬರಿಗೂ ಸರ್ಕಾರಿ ಯೋಜನೆಗಳ ಲಾಭ ತಲುಪಿಸುವುದು ನನ್ನ ಜವಾಬ್ದಾರಿ” ಎಂದು ಶಾಸಕ ಶ್ರೀ ಪ್ರಿಯಕೃಷ್ಣ ತಿಳಿಸಿದರು.

Editor

Leave a comment