Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಸುದ್ದಿಗೋಷ್ಠಿ.

ಕರುನಾಡು ಘರ್ಜುನೆ ಸುದ್ದಿ ಗದಗ-23. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿ11-07-2026 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು…

ಕರುನಾಡು ಘರ್ಜುನೆ ಸುದ್ದಿ ಗದಗ-23. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿ11-07-2026 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ತಾವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಕಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಅವರು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 21011 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2835 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ ಬೌನ್ಸ್ ಪ್ರಕರಣಗಳು. ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ದಿ111-07-2026 ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಮೂಲಕ ಕರೆ ನೀಡಲಾಗಿದೆ.

ಕಳೆದ ಮಾರ್ಚ-2026 ರಂದು ಜರುಗಿದ ಲೋಕ ಅದಾಲತ್‌ ನಲ್ಲಿ 3383 ಚಾಲ್ತಿ ಪ್ರಕರಣಗಳನ್ನು ಹಾಗೂ 62299 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 65682 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 03 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಮೂಲಕ ಕರೆ ನೀಡಲಾಗಿದೆ. ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ ಅವರು ಉಪಸ್ಥಿತರಿದ್ದರು.

Editor

Leave a comment